AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Maxwell injury update: ಹೈದರಾಬಾದ್ ವಿರುದ್ಧ ಕಣಕ್ಕಿಳಿಯುತ್ತಾರಾ ಮ್ಯಾಕ್ಸ್‌ವೆಲ್? ಮೊ ಬೊಬಾಟ್ ಹೇಳಿದ್ದಿದು

Glenn Maxwell injury update: ಮುಂಬೈ ವಿರುದ್ಧದ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದ ಮ್ಯಾಕ್ಸ್‌ವೆಲ್​ರನ್ನು ಸ್ಕ್ಯಾನಿಂಗ್​ಗೆ ಒಳಪಡಿಸಲಾಗಿತ್ತು. ಆ ನಂತರ ಮ್ಯಾಕ್ಸ್‌ವೆಲ್ ಮುಂದಿನ ಕೆಲವು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ಆ ಎಲ್ಲಾ ವರದಿಗಳಿಗೆ ತಂಡದ ನಿರ್ದೇಶಕ ಮೊ ಬೊಬಾಟ್ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳಿದಿದ್ದಾರೆ.

ಪೃಥ್ವಿಶಂಕರ
|

Updated on:Apr 15, 2024 | 4:02 PM

Share
17ನೇ ಆವೃತ್ತಿಯ ಐಪಿಎಲ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಆರ್​ಸಿಬಿ ಇಂದು ತನ್ನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಆರ್​ಸಿಬಿ ತವರು ನೆಲವಾದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲ್ಲಿದೆ.

1 / 7
ಹೀಗಾಗಿ ಸತತ 4 ಸೋಲುಗಳಿಂದ ಕಂಗೆಟ್ಟಿರುವ ಆರ್​ಸಿಬಿ ಇಂದಿನ ಪಂದ್ಯದಲ್ಲಿ ಗೆದ್ದು ಮತ್ತೆ ಗೆಲುವಿನ ಲಯಕ್ಕೆ ಮರಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ. ಆದರೆ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದ ವೇಳೆ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದ ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಲಭ್ಯತೆಯ ಬಗ್ಗೆ ಪ್ರಶ್ನೆ ಮೂಡಿದೆ.

2 / 7
ಮುಂಬೈ ವಿರುದ್ಧದ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದ ಮ್ಯಾಕ್ಸ್‌ವೆಲ್​ರನ್ನು ಸ್ಕ್ಯಾನಿಂಗ್​ಗೆ ಒಳಪಡಿಸಲಾಗಿತ್ತು. ಆ ನಂತರ ಮ್ಯಾಕ್ಸ್‌ವೆಲ್ ಮುಂದಿನ ಕೆಲವು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ಆ ಎಲ್ಲಾ ವರದಿಗಳಿಗೆ ತಂಡದ ನಿರ್ದೇಶಕ ಮೊ ಬೊಬಾಟ್ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳಿದಿದ್ದಾರೆ.

3 / 7
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್​ಸಿಬಿ ತಂಡದ ನಿರ್ದೇಶಕ ಮೊ ಬೊಬಾಟ್, ಇಂಜುರಿಗೊಂಡ ಬಳಿಕ ಮ್ಯಾಕ್ಸ್‌ವೆಲ್ ಒಂದೆರಡು ಸ್ಕ್ಯಾನ್‌ಗಳಿಗೆ ಒಳಗಾಗಿದ್ದರು. ಸ್ಕ್ಯಾನಿಂಗ್ ವರದಿ ಬಂದಿದ್ದು, ಮ್ಯಾಕ್ಸ್​ವೆಲ್​ ಗಾಯ ಗಂಭೀರವಾಗಿಲ್ಲ ಎಂದು ತಿಳಿದುಬಂದಿದೆ.

4 / 7
ಆದ್ದರಿಂದ, ಯಾವುದೇ ಗಾಯದ ಆತಂಕವಿಲ್ಲದ ಕಾರಣ ಮ್ಯಾಕ್ಸ್‌ವೆಲ್ ಇಂದು ಅಭ್ಯಾಸ ಮಾಡಲಿದ್ದಾರೆ ಎಂದಿದ್ದಾರೆ. ಇದರರ್ಥ ಇಂದಿನ ಪಂದ್ಯದಲ್ಲಿ ಮ್ಯಾಕ್ಸ್​ವೆಲ್ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂಬುದು ಮೊ ಬೊಬಾಟ್ ಹೇಳಿಕೆಯಿಂದ ಸ್ಪಷ್ಟವಾಗಿದೆ. ಆದರೆ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಅವರನ್ನು ಈ ಪಂದ್ಯದಿಂದ ಕೈಬಿಡುವ ಸಾಧ್ಯತೆಗಳು ಹೆಚ್ಚಿವೆ.

5 / 7
ಈ ಸೀಸನ್ ಆರಂಭವಾದಾಗಿನಿಂದಲೂ ಮ್ಯಾಕ್ಸ್‌ವೆಲ್ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಇದುವರೆಗೆ ಆಡಿರುವ ಆರು ಇನ್ನಿಂಗ್ಸ್‌ಗಳಿಂದ ಮ್ಯಾಕ್ಸ್‌ವೆಲ್ ಕೇವಲ 5.33 ಸರಾಸರಿಯಲ್ಲಿ 32 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ ಮೂರು ಡಕ್‌ಗಳು ಸೇರಿವೆ.  ಹೀಗಾಗಿ ಇಂದಿನ ಪಂದ್ಯದಲ್ಲಿ ಅವರ ಬದಲು ಕ್ಯಾಮರೂನ್ ಗ್ರೀನ್​ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

6 / 7
ಆರ್​ಸಿಬಿ ಸಂಭಾವ್ಯ ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ವೆಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್/ ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ರೀಸ್ ಟಾಪ್ಲೆ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸೌರವ್ ಚೌಹಾಣ್.

7 / 7

Published On - 4:01 pm, Mon, 15 April 24

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ

ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್