Glenn Maxwell injury update: ಹೈದರಾಬಾದ್ ವಿರುದ್ಧ ಕಣಕ್ಕಿಳಿಯುತ್ತಾರಾ ಮ್ಯಾಕ್ಸ್‌ವೆಲ್? ಮೊ ಬೊಬಾಟ್ ಹೇಳಿದ್ದಿದು
Glenn Maxwell injury update: ಮುಂಬೈ ವಿರುದ್ಧದ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದ ಮ್ಯಾಕ್ಸ್ವೆಲ್ರನ್ನು ಸ್ಕ್ಯಾನಿಂಗ್ಗೆ ಒಳಪಡಿಸಲಾಗಿತ್ತು. ಆ ನಂತರ ಮ್ಯಾಕ್ಸ್‌ವೆಲ್ ಮುಂದಿನ ಕೆಲವು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ಆ ಎಲ್ಲಾ ವರದಿಗಳಿಗೆ ತಂಡದ ನಿರ್ದೇಶಕ ಮೊ ಬೊಬಾಟ್ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳಿದಿದ್ದಾರೆ.
1 / 7
17ನೇ ಆವೃತ್ತಿಯ ಐಪಿಎಲ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಆರ್ಸಿಬಿ ಇಂದು ತನ್ನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಆರ್ಸಿಬಿ ತವರು ನೆಲವಾದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲ್ಲಿದೆ.
2 / 7
ಹೀಗಾಗಿ ಸತತ 4 ಸೋಲುಗಳಿಂದ ಕಂಗೆಟ್ಟಿರುವ ಆರ್ಸಿಬಿ ಇಂದಿನ ಪಂದ್ಯದಲ್ಲಿ ಗೆದ್ದು ಮತ್ತೆ ಗೆಲುವಿನ ಲಯಕ್ಕೆ ಮರಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ. ಆದರೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದ ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಲಭ್ಯತೆಯ ಬಗ್ಗೆ ಪ್ರಶ್ನೆ ಮೂಡಿದೆ.
3 / 7
ಮುಂಬೈ ವಿರುದ್ಧದ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದ ಮ್ಯಾಕ್ಸ್ವೆಲ್ರನ್ನು ಸ್ಕ್ಯಾನಿಂಗ್ಗೆ ಒಳಪಡಿಸಲಾಗಿತ್ತು. ಆ ನಂತರ ಮ್ಯಾಕ್ಸ್‌ವೆಲ್ ಮುಂದಿನ ಕೆಲವು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ಆ ಎಲ್ಲಾ ವರದಿಗಳಿಗೆ ತಂಡದ ನಿರ್ದೇಶಕ ಮೊ ಬೊಬಾಟ್ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳಿದಿದ್ದಾರೆ.
4 / 7
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್ಸಿಬಿ ತಂಡದ ನಿರ್ದೇಶಕ ಮೊ ಬೊಬಾಟ್, ಇಂಜುರಿಗೊಂಡ ಬಳಿಕ ಮ್ಯಾಕ್ಸ್‌ವೆಲ್ ಒಂದೆರಡು ಸ್ಕ್ಯಾನ್‌ಗಳಿಗೆ ಒಳಗಾಗಿದ್ದರು. ಸ್ಕ್ಯಾನಿಂಗ್ ವರದಿ ಬಂದಿದ್ದು, ಮ್ಯಾಕ್ಸ್‌ವೆಲ್ ಗಾಯ ಗಂಭೀರವಾಗಿಲ್ಲ ಎಂದು ತಿಳಿದುಬಂದಿದೆ.
5 / 7
ಆದ್ದರಿಂದ, ಯಾವುದೇ ಗಾಯದ ಆತಂಕವಿಲ್ಲದ ಕಾರಣ ಮ್ಯಾಕ್ಸ್‌ವೆಲ್ ಇಂದು ಅಭ್ಯಾಸ ಮಾಡಲಿದ್ದಾರೆ ಎಂದಿದ್ದಾರೆ. ಇದರರ್ಥ ಇಂದಿನ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂಬುದು ಮೊ ಬೊಬಾಟ್ ಹೇಳಿಕೆಯಿಂದ ಸ್ಪಷ್ಟವಾಗಿದೆ. ಆದರೆ ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಅವರನ್ನು ಈ ಪಂದ್ಯದಿಂದ ಕೈಬಿಡುವ ಸಾಧ್ಯತೆಗಳು ಹೆಚ್ಚಿವೆ.
6 / 7
ಈ ಸೀಸನ್ ಆರಂಭವಾದಾಗಿನಿಂದಲೂ ಮ್ಯಾಕ್ಸ್‌ವೆಲ್ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದಾರೆ. ಇದುವರೆಗೆ ಆಡಿರುವ ಆರು ಇನ್ನಿಂಗ್ಸ್‌ಗಳಿಂದ ಮ್ಯಾಕ್ಸ್‌ವೆಲ್ ಕೇವಲ 5.33 ಸರಾಸರಿಯಲ್ಲಿ 32 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ ಮೂರು ಡಕ್‌ಗಳು ಸೇರಿವೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಅವರ ಬದಲು ಕ್ಯಾಮರೂನ್ ಗ್ರೀನ್ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.
7 / 7
ಆರ್ಸಿಬಿ ಸಂಭಾವ್ಯ ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ವೆಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್/ ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ರೀಸ್ ಟಾಪ್ಲೆ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸೌರವ್ ಚೌಹಾಣ್.
Published On - 4:01 pm, Mon, 15 April 24