ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಆಟಗಾರರು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸಿದರು. ಇದೇ ವೇಳೆ ಕರ್ನಾಟಕದ ಆಟಗಾರರು ಜೊತೆಯಾಗಿ ಕಾಣಿಸಿಕೊಂಡರು. ಅಂದರೆ ಆರ್ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದರೆ, ಗುಜರಾತ್ ಟೈಟಾನ್ಸ್ ತಂಡ ಓರ್ವ ಕನ್ನಡಿಗ ಸ್ಥಾನ ಪಡೆದಿದ್ದಾರೆ. ಈ ಮೂವರ ಮುಖಾಮುಖಿಯ ಫೋಟೋ ಇದೀಗ ವೈರಲ್ ಆಗಿದೆ.