IPL 2024: ಡೆಲ್ಲಿ ದಾಳಿಗೆ ತತ್ತರಿಸಿದ ಗುಜರಾತ್! ನೂತನ ದಾಖಲೆ ಬರೆದ ಪಂತ್ ಪಡೆ
IPL 2024: ಇಂದಿನ ಪಂದ್ಯದಲ್ಲಿ ಗುಜರಾತ್ ತಂಡವನ್ನು 89 ರನ್ಗಳಿಗೆ ಆಲೌಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಐಪಿಎಲ್ ಇತಿಹಾಸದಲ್ಲಿ ಶುಭ್ಮನ್ ಗಿಲ್ ಪಡೆಯನ್ನು ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ.
1 / 7
ಗುಜರಾತ್ನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ರ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ 32ನೇ ಪಂದ್ಯದಲ್ಲಿ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದೆ.
2 / 7
ತನ್ನ ತವರು ನೆಲದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ, ಡೆಲ್ಲಿ ಬೌಲರ್ಗಳ ದಾಳಿಗೆ ತತ್ತರಿಸಿ ಕೇವಲ 89 ರನ್ಗಳಿಗೆ ಆಲೌಟ್ ಆಯಿತು. ತಂಡದ ಪರ ರಶೀದ್ ಖಾನ್ 31 ರನ್ ಕಲೆಹಾಕಿದ್ದನ್ನು ಬಿಟ್ಟರೆ ಉಳಿದವರಿಂದ ಯಾವುದೇ ಕೊಡುಗೆ ಕಂಡುಬರಲಿಲ್ಲ.
3 / 7
ಇತ್ತ ಲೀಗ್ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟು ಕಳೆದ ಪಂದ್ಯದಿಂದ ಗೆಲುವಿನ ಲಯ ಕಂಡುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಇತಿಹಾಸದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಬೇರೆ ಯಾವ ತಂಡವೂ ಮಾಡಲಾಗದ ಸಾಧನೆಯೊಂದನ್ನು ಮಾಡಿದೆ.
4 / 7
ಅದೆನೆಂದರೆ ಇಂದಿನ ಪಂದ್ಯದಲ್ಲಿ ಗುಜರಾತ್ ತಂಡವನ್ನು 89 ರನ್ಗಳಿಗೆ ಆಲೌಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಐಪಿಎಲ್ ಇತಿಹಾಸದಲ್ಲಿ ಶುಭ್ಮನ್ ಗಿಲ್ ಪಡೆಯನ್ನು ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ.
5 / 7
ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಐಪಿಎಲ್‌ನಲ್ಲಿ ಯಾವುದೇ ತಂಡ, ಗುಜರಾತ್ ತಂಡವನ್ನು 100 ರನ್‌ಗಳಿಗಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿರಲಿಲ್ಲ. ಅಥವಾ ಕಟ್ಟಿ ಹಾಕಿರಲಿಲ್ಲ. ಇದೀಗ ಈ ಸಾಧನೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಮಾಡಿದೆ.
6 / 7
ಇದಲ್ಲದೆ ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ತಂಡವೊಂದನ್ನು ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿರುವುದು ಕೂಡ ಇದೇ ಮೊದಲು. ಇದಕ್ಕೂ ಮೊದಲು ಡೆಲ್ಲಿ ತಂಡ, ಮುಂಬೈ ಇಂಡಿಯನ್ಸ್ ತಂಡವನ್ನು 92 ರನ್ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿತ್ತು.
7 / 7
ಗುಜರಾತ್ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಡೆಲ್ಲಿ ಬೌಲರ್ಗಳ ಚಮತ್ಕಾರ ಅಮೋಘವಾಗಿತ್ತು. ಡೆಲ್ಲಿ ಪರ ಮುಖೇಶ್ ಕುಮಾರ್ ಗರಿಷ್ಠ 3 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ ಮತ್ತು ಟ್ರಿಸ್ಟಾನ್ ಸ್ಟಬ್ಸ್ ತಲಾ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ಖಲೀಲ್ ಅಹ್ಮದ್ ತಲಾ 1 ವಿಕೆಟ್ ಪಡೆದರು.