ಹಾಗೆಯೇ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಫ್ರೇಸರ್-ಮೆಕ್‌ಗುರ್ಕ್, ಡೆಲ್ಲಿ ಕ್ಯಾಪಿಟಲ್ಸ್ ಪರ ಅತಿವೇಗದ ಅರ್ಧಶತಕ ಗಳಿಸಿದ ತನ್ನದೇ ದಾಖಲೆಯನ್ನು ಮತ್ತೊಮ್ಮೆ ಸರಿಗಟ್ಟಿದರು. ಫ್ರೇಸರ್-ಮೆಕ್‌ಗುರ್ಕ್ ಐಪಿಎಲ್ ಇತಿಹಾಸದಲ್ಲಿ 15 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಹೆಚ್ಚು ಅರ್ಧಶತಕಗಳನ್ನು ದಾಖಲಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.