Updated on: Apr 20, 2024 | 11:10 PM
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಬ್ಯಾಟರ್ಗಳು ಬೌಂಡರಿ ಹಾಗೂ ಸಿಕ್ಸರ್ಗಳ ಮಳೆಗರೆಯುವ ಮೂಲಕ ಅಭಿಮಾನಿಗಳು ಹುಚ್ಚೆದ್ದು ಕುಣಿಯುಂತೆ ಮಾಡಿದ್ದಾರೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಹಾಗೂ ಶಹಬಾಜ್ ಅಹ್ಮದ್ ಅವರ ಸ್ಫೋಟಕ ಬ್ಯಾಟಿಂಗ್ನ ಆಧಾರದ ಮೇಲೆ 266 ರನ್ಗಳ ಬೃಹತ್ ಟಾರ್ಗೆಟ್ ಸೆಟ್ ಮಾಡಿತು.
ಅಲ್ಲದೆ ಮೊದಲ ವಿಕೆಟ್ಗೆ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಮೊದಲ 6 ಓವರ್ಗಳಲ್ಲಿ ಬರೋಬ್ಬರಿ 125 ರನ್ ಬಾರಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ ಅತ್ಯಧಿಕ ರನ್ ದಾಖಲಿಸಿದ ದಾಖಲೆ ಕೂಡ ನಿರ್ಮಿಸಿದರು.
ಇದಾದ ಬಳಿಕ ಹೈದರಾಬಾದ್ ನೀಡಿರುವ 266 ರನ್ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಪರ ಆಸ್ಟ್ರೇಲಿಯಾದ ಯುವ ಬ್ಯಾಟರ್ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಈ ಐಪಿಎಲ್ನ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ನಿರ್ಮಿಸಿದರು.
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಕೇವಲ 15 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿ, ಈ ಸೀಸನ್ನ ಅತಿ ವೇಗದ ಶತಕ ಸಿಡಿಸಿದ ದಾಖಲೆ ನಿರ್ಮಿಸಿದರು.
ಇವರಿಗೂ ಮೊದಲು ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕರಾದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ತಲಾ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಈ ಐಪಿಎಲ್ನ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು.
ಇದೀಗ ಈ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿರುವ ಜೇಕ್ ಫ್ರೇಸರ್ ಮೆಕ್‌ಗುರ್ಕ್, ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೂರನೇ ವೇಗದ ಅರ್ಧಶತಕ ಸಿಡಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಂತಿಮವಾಗಿ ಫ್ರೇಸರ್ ಮೆಕ್‌ಗುರ್ಕ್ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 7 ಸಿಕ್ಸರ್ ಸಹಿತ 65 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು.