IPL 2024: ಸಿಕ್ಸ್ಗಳ ಸುರಿಮಳೆ: ಹೊಸ ದಾಖಲೆ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 8ನೇ ಪಂದ್ಯದಲ್ಲಿ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ನೀಡಿದ 278 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 246 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 31 ರನ್ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿದೆ.
Updated on: Mar 28, 2024 | 7:23 AM

ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 8ನೇ ಪಂದ್ಯದಲ್ಲಿ ಸಿಕ್ಸ್ಗಳ ಸುರಿಮಳೆಯಾಗಿದೆ. ಈ ಸಿಕ್ಸ್ಗಳೊಂದಿಗೆ ಇದೀಗ ಸನ್ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಬ್ಯಾಟರ್ಗಳು ಐಪಿಎಲ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಮೂಡಿಬಂದಿವೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ 3 ಸಿಕ್ಸ್ ಬಾರಿಸಿದರೆ, ಅಭಿಷೇಕ್ ಶರ್ಮಾ 7 ಸಿಕ್ಸ್ ಸಿಡಿಸಿದರು. ಇನ್ನು ಮಾರ್ಕ್ರಾಮ್ 1 ಸಿಕ್ಸರ್ ಬಾರಿಸಿದರೆ, ಹೆನ್ರಿಕ್ ಕ್ಲಾಸೆನ್ ಬರೋಬ್ಬರಿ 7 ಸಿಕ್ಸ್ ಸಿಡಿಸಿ ಅಬ್ಬರಿಸಿದರು. ಇದರೊಂದಿಗೆ ಎಸ್ಆರ್ಹೆಚ್ ಇನಿಂಗ್ಸ್ನಲ್ಲಿ 18 ಸಿಕ್ಸ್ಗಳು ಮೂಡಿಬಂದಿತ್ತು.

ಇನ್ನು ಮುಂಬೈ ಇಂಡಿಯನ್ಸ್ ತಂಡದ ಪರ ರೋಹಿತ್ ಶರ್ಮಾ 3 ಸಿಕ್ಸ್ ಬಾರಿಸಿದರೆ, ಇಶಾನ್ ಕಿಶನ್ 4 ಸಿಕ್ಸ್ ಸಿಡಿಸಿದ್ದರು. ಹಾಗೆಯೇ ನಮನ್ ಧಿರ್ 2, ತಿಲಕ್ ವರ್ಮಾ 6 ಸಿಕ್ಸ್ಗಳನ್ನು ಬಾರಿಸಿದ್ದರು. ಇನ್ನು ಹಾರ್ದಿಕ್ ಪಾಂಡ್ಯ 1, ಟಿಮ್ ಡೇವಿಡ್ 3 ಹಾಗೂ ರೊಮಾರಿಯೊ ಶೆಫರ್ಡ್ 1 ಸಿಕ್ಸ್ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ಬ್ಯಾಟರ್ಗಳು ಒಟ್ಟು 20 ಸಿಕ್ಸ್ಗಳನ್ನು ಬಾರಿಸಿದ್ದರು.

ಇದರೊಂದಿಗೆ ಒಟ್ಟು ಸಿಕ್ಸರ್ಗಳ ಸಂಖ್ಯೆ 38 ಕ್ಕೇರಿತು. ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್ಗಳು ಮೂಡಿಬಂದ ಪಂದ್ಯ ಎಂಬ ದಾಖಲೆ ಕೂಡ ಸನ್ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ಪಾಲಾಯಿತು.

ಇದಕ್ಕೂ ಮುನ್ನ ಈ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಹೆಸರಿನಲ್ಲಿತ್ತು. 2018 ರಲ್ಲಿ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಉಭಯ ತಂಡಗಳು ಜೊತೆಗೂಡಿ ಒಟ್ಟು 33 ಸಿಕ್ಸ್ ಸಿಡಿಸಿ ಈ ವಿಶೇಷ ದಾಖಲೆ ಬರೆದಿದ್ದರು.

ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ಬ್ಯಾಟರ್ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ 38 ಸಿಕ್ಸ್ ಸಿಡಿಸಿ ಐಪಿಎಲ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

TV9 Kannada
Read More



