AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಿಕ್ಸ್​ಗಳ ಸುರಿಮಳೆ: ಹೊಸ ದಾಖಲೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​) 8ನೇ ಪಂದ್ಯದಲ್ಲಿ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡ ನೀಡಿದ 278 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 31 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿದೆ.

TV9 Web
| Edited By: |

Updated on: Mar 28, 2024 | 7:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 8ನೇ ಪಂದ್ಯದಲ್ಲಿ ಸಿಕ್ಸ್​ಗಳ ಸುರಿಮಳೆಯಾಗಿದೆ. ಈ ಸಿಕ್ಸ್​ಗಳೊಂದಿಗೆ ಇದೀಗ ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಂದರೆ ಐಪಿಎಲ್​ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಮೂಡಿಬಂದಿವೆ.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ 3 ಸಿಕ್ಸ್ ಬಾರಿಸಿದರೆ, ಅಭಿಷೇಕ್ ಶರ್ಮಾ 7 ಸಿಕ್ಸ್ ಸಿಡಿಸಿದರು. ಇನ್ನು ಮಾರ್ಕ್ರಾಮ್ 1 ಸಿಕ್ಸರ್ ಬಾರಿಸಿದರೆ, ಹೆನ್ರಿಕ್ ಕ್ಲಾಸೆನ್ ಬರೋಬ್ಬರಿ 7 ಸಿಕ್ಸ್ ಸಿಡಿಸಿ ಅಬ್ಬರಿಸಿದರು. ಇದರೊಂದಿಗೆ ಎಸ್​ಆರ್​ಹೆಚ್​ ಇನಿಂಗ್ಸ್​ನಲ್ಲಿ 18 ಸಿಕ್ಸ್​ಗಳು ಮೂಡಿಬಂದಿತ್ತು.

2 / 6
ಇನ್ನು ಮುಂಬೈ ಇಂಡಿಯನ್ಸ್ ತಂಡದ ಪರ ರೋಹಿತ್ ಶರ್ಮಾ 3 ಸಿಕ್ಸ್ ಬಾರಿಸಿದರೆ, ಇಶಾನ್ ಕಿಶನ್ 4 ಸಿಕ್ಸ್ ಸಿಡಿಸಿದ್ದರು. ಹಾಗೆಯೇ ನಮನ್ ಧಿರ್ 2, ತಿಲಕ್ ವರ್ಮಾ 6 ಸಿಕ್ಸ್​ಗಳನ್ನು ಬಾರಿಸಿದ್ದರು. ಇನ್ನು ಹಾರ್ದಿಕ್ ಪಾಂಡ್ಯ 1, ಟಿಮ್ ಡೇವಿಡ್ 3 ಹಾಗೂ ರೊಮಾರಿಯೊ ಶೆಫರ್ಡ್ 1 ಸಿಕ್ಸ್ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು ಒಟ್ಟು 20 ಸಿಕ್ಸ್​ಗಳನ್ನು ಬಾರಿಸಿದ್ದರು.

3 / 6
ಇದರೊಂದಿಗೆ ಒಟ್ಟು ಸಿಕ್ಸರ್​ಗಳ ಸಂಖ್ಯೆ 38 ಕ್ಕೇರಿತು. ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್​ಗಳು ಮೂಡಿಬಂದ ಪಂದ್ಯ ಎಂಬ ದಾಖಲೆ ಕೂಡ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ಪಾಲಾಯಿತು.

4 / 6
ಇದಕ್ಕೂ ಮುನ್ನ ಈ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಹೆಸರಿನಲ್ಲಿತ್ತು. 2018 ರಲ್ಲಿ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಉಭಯ ತಂಡಗಳು ಜೊತೆಗೂಡಿ ಒಟ್ಟು 33 ಸಿಕ್ಸ್ ಸಿಡಿಸಿ ಈ ವಿಶೇಷ ದಾಖಲೆ ಬರೆದಿದ್ದರು.

5 / 6
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ 38 ಸಿಕ್ಸ್ ಸಿಡಿಸಿ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

6 / 6
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್

ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು

ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು

ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!

ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?