ಮುಂಬರುವ ಪಂದ್ಯಗಳಲ್ಲಿ ಕೇನ್ ಆಡುವ ಬಗ್ಗೆ ಅನುಮಾನವಿದೆ. ಏಕೆಂದರೆ ಈ ವರ್ಷ ಜೂನ್ 1 ರಿಂದ ಪ್ರಾರಂಭವಾಗುವ ಟಿ20 ವಿಶ್ವಕಪ್‌ಗೆ ವಿಲಿಯಮ್ಸನ್ ತನ್ನನ್ನು ತಾನು ಫಿಟ್ ಆಗಿಟ್ಟುಕೊಳ್ಳಲು ಚಿಂತಿಸುತ್ತಿದ್ದಾರೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ, ಅವರು ಐಪಿಎಲ್ 2024 ರಿಂದ ತಮ್ಮ ಹೆಸರನ್ನು ಹಿಂಪಡೆಯುವ ಸಾಧ್ಯತೆಗಳಿವೆ. ಅದೇ ಸಮಯದಲ್ಲಿ, ಪಾಕಿಸ್ತಾನ ಸರಣಿಯ ನಂತರ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅವರು ಆಡುವ ಬಗ್ಗೆ ಸಸ್ಪೆನ್ಸ್ ಇದೆ.