ವಿಶೇಷ ಎಂದರೆ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಜೇಕ್ ಫ್ರೇಸರ್ ಅವರನ್ನು ಯಾವುದೇ ಫ್ರಾಂಚೈಸಿ ಆಯ್ಕೆ ಮಾಡಿರಲಿಲ್ಲ. ಆದರೆ ಐಪಿಎಲ್ ಆರಂಭದ ವೇಳೆ ಲುಂಗಿ ಎನ್ಗಿಡಿ ಗಾಯಗೊಂಡಿದ್ದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜೇಕ್ ಫ್ರೇಸರ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು. ಇದೀಗ ಬದಲಿ ಆಟಗಾರನಾಗಿ ಬಂದ ಜೇಕ್ ಫ್ರೇಸರ್ ಮೆಕ್ಗುರ್ಕ್ ಸೂಪರ್ ಸ್ಟ್ರೈಕರ್ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ.