IPL 2024: ಇನ್ನೆರಡು ಪಂದ್ಯಗಳು ಮಾತ್ರ ಬಾಕಿ: ಇಲ್ಲಿದೆ ವೇಳಾಪಟ್ಟಿ
IPL 2024: ಈ ಬಾರಿಯ ಐಪಿಎಲ್ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿದಿದ್ದವು. ಈ ತಂಡಗಳಲ್ಲಿ ಈಗಾಗಲೇ 7 ಟೀಮ್ಗಳು ಹೊರಬಿದ್ದಿದೆ. ಇನ್ನುಳಿದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರ. ಈ ತಂಡಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಈಗಾಗಲೇ ಫೈನಲ್ಗೆ ಲಗ್ಗೆಯಿಟ್ಟಿದೆ.
1 / 5
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 10 ತಂಡಗಳ ನಡುವಣ ಕಾದಾಟದೊಂದಿಗೆ ಶುರುವಾದ ಟೂರ್ನಿಯಲ್ಲಿ ಇದೀಗ ಕೇವಲ 3 ತಂಡಗಳು. ಹಾಗೆಯೇ ಉಳಿದಿರುವುದು ಕೇವಲ 2 ಮ್ಯಾಚ್ ಮಾತ್ರ.
2 / 5
ಮೊದಲ ಕ್ವಾಲಿ ಫೈಯರ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈಗಾಗಲೇ ಫೈನಲ್ಗೆ ಪ್ರವೇಶಿಸಿದೆ. ಇನ್ನು ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಕೆಕೆಆರ್ ಕಣಕ್ಕಿಳಿಯಲಿದೆ.
3 / 5
ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅಂದರೆ ಮತ್ತೊಂದು ನಾಕೌಟ್ ಪಂದ್ಯದಲ್ಲಿ ಆರ್ಆರ್ ತಂಡ ಕಣಕ್ಕಿಳಿಯಲಿದೆ.
4 / 5
ಮೇ 24 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್ನಲ್ಲಿ ಸೋತ ಸನ್ರೈಸರ್ಸ್ ಹೈದರಾಬಾದ್ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.
5 / 5
ಎಸ್ಆರ್ಹೆಚ್ ಮತ್ತು ಆರ್ಆರ್ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೆ ಪ್ರವೇಶಿಸಲಿದ್ದು, ಈ ಮೂಲಕ ಮೇ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿರುವ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.