IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಹಂತದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದ್ದು, ಉಳಿದ ಮ್ಯಾಚ್ಗಳ ದಿನಾಂಕವನ್ನು ಲೋಕಸಭಾ ಚುನಾವಣೆಯ ಡೇಟ್ ಪ್ರಕಟವಾದ ಬಳಿಕ ನಿರ್ಧಾರ ಮಾಡಲಾಗುತ್ತದೆ. ಹೀಗಾಗಿ 17 ದಿನಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ.