IPL 2024: ಕಳೆದ ಬಾರಿಯ ಐಪಿಎಲ್ನಲ್ಲಿ ದಾಖಲಾದ ಟಾಪ್-10 ದಾಖಲೆಗಳಿವು..!
TV9 Web | Updated By: ಝಾಹಿರ್ ಯೂಸುಫ್
Updated on:
Mar 17, 2024 | 11:31 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಮಾರ್ಚ್ 22 ರಿಂದ ಶುರುವಾಗಲಿರುವ ಐಪಿಎಲ್ ಸೀಸನ್ 17 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಣಕ್ಕಿಳಿಯಲಿದೆ. ಇದರೊಂದಿಗೆ IPL 2024 ಕ್ಕೆ ಅದ್ಧೂರಿ ಚಾಲನೆ ದೊರೆಯಲಿದೆ.
1 / 11
IPL 2024: ರಂಗು ರಂಗಿನ ಕ್ರಿಕೆಟ್ ಟೂರ್ನಿ ಐಪಿಎಲ್ ಸೀಸನ್ 17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಶುಕ್ರವಾರದಿಂದ ಆರಂಭವಾಗಲಿರುವ 17ನೇ ಆವೃತ್ತಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿದೆ. ಇದಕ್ಕೂ ಮುನ್ನ ಕಳೆದ ಸೀಸನ್‌ನಲ್ಲಿ ನಿರ್ಮಾಣವಾಗಿದ್ದ ಕೆಲ ದಾಖಲೆಗಳತ್ತ ಕಣ್ಣಾಡಿಸೋಣ...
2 / 11
ಚಾಂಪಿಯನ್ಸ್ ದಾಖಲೆ: ಐಪಿಎಲ್ 2023 ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಸೋಲುಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಪ್ರಶಸ್ತಿ ಗೆದ್ದುಕೊಂಡಿತ್ತು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 5 ಬಾರಿ ಪ್ರಶಸ್ತಿ ಗೆದ್ದ 2ನೇ ತಂಡ ಎಂಬ ದಾಖಲೆ ಸಿಎಸ್ಕೆ ಪಾಲಾಯಿತು. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಈ ಸಾಧನೆ ಮಾಡಿತ್ತು.
3 / 11
ಐಪಿಎಲ್ ಸಿಕ್ಸರ್ ದಾಖಲೆ: ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಸಿಕ್ಸರ್ ಮೂಡಿಬಂದಿದ್ದು 2023 ರಲ್ಲಿ. ಅಂದರೆ ಐಪಿಎಲ್ ಸೀಸನ್ 16 ರಲ್ಲಿ ಒಟ್ಟು 1124 ಸಿಕ್ಸರ್‌ಗಳು ಸಿಡಿದಿದ್ದವು. ಇದಕ್ಕೂ ಮುನ್ನ 2022 ರಲ್ಲಿ 1062 ಸಿಕ್ಸರ್‌ಗಳನ್ನು ಬಾರಿಸಿದ್ದು ದಾಖಲೆಯಾಗಿತ್ತು.
4 / 11
ಫೋರ್ಗಳ ದಾಖಲೆ: ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಫೋರ್ಗಳು ಮೂಡಿಬಂದಿರುವುದು ಸೀಸನ್ 16 ರಲ್ಲಿ ಎಂಬುದು ವಿಶೇಷ. 2022 ರಲ್ಲಿ 2018 ಫೋರ್ಗಳನ್ನು ಬಾರಿಸಿದ್ದರೆ, ಕಳೆದ ಬಾರಿ ಬರೋಬ್ಬರಿ 2174 ಬೌಂಡರಿಗಳನ್ನು ಸಿಡಿಸಿದ್ದರು.
5 / 11
ಶತಕಗಳ ದಾಖಲೆ: ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿಗಳನ್ನು ಬಾರಿಸಿರುವುದು ಕಳೆದ ಬಾರಿ ಎಂಬುದು ವಿಶೇಷ. 2022 ರಲ್ಲಿ 8 ಶತಕಗಳನ್ನು ಬಾರಿಸಿದ್ದು ದಾಖಲೆಯಾಗಿತ್ತು. ಆದರೆ ಐಪಿಎಲ್ 2023 ರಲ್ಲಿ 12 ಶತಕಗಳು ಮೂಡಿಬಂದಿದ್ದವು.
6 / 11
ಅರ್ಧಶತಕಗಳ ದಾಖಲೆ: ಐಪಿಎಲ್ ಸೀಸನ್ವೊಂದರಲ್ಲಿ ಅತೀ ಹೆಚ್ಚು ಶತಕ ಬಾರಿಸಿದ್ದು ಕೂಡ 2023 ರಲ್ಲಿ. ಐಪಿಎಲ್ ಸೀಸನ್ 16 ರಲ್ಲಿ ಒಟ್ಟು 153 ಅರ್ಧ ಶತಕಗಳು ಮೂಡಿಬಂದಿವೆ. ಇದಕ್ಕೂ ಮುನ್ನ ಐಪಿಎಲ್ 2022ರ ಸೀಸನ್‌ನಲ್ಲಿ 118 ಅರ್ಧಶತಕ ಬಾರಿಸಿದ್ದು ದಾಖಲೆಯಾಗಿತ್ತು.
7 / 11
ಸರಾಸರಿ ಸ್ಕೋರ್ ದಾಖಲೆ: ಐಪಿಎಲ್‌ನ 16ನೇ ಸೀಸನ್‌ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 183 ಎಂಬುದು ವಿಶೇಷ. ಇದು ಯಾವುದೇ ಐಪಿಎಲ್ ಸೀಸನ್ನ ಗರಿಷ್ಠ ಮೊತ್ತವಾಗಿದೆ. 2018ರಲ್ಲಿ ಮೊದಲ ಇನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 172 ಆಗಿತ್ತು.
8 / 11
ಬ್ಯಾಟ್ಸ್ಮನ್ಗಳ ಅಬ್ಬರದ ದಾಖಲೆ: ಕಳೆದ ಬಾರಿಯ ಐಪಿಎಲ್ನಲ್ಲಿ ಬ್ಯಾಟ್ಸ್ಮನ್ಗಳು ಪ್ರತಿ ಓವರ್‌ಗೆ 8.99 ಸರಾಸರಿಯಲ್ಲಿ ರನ್ಗಳಿಸಿದ್ದಾರೆ. 2018 ರಲ್ಲಿ ಪ್ರತಿ ಓವರ್‌ಗೆ 8.65 ಸರಾಸರಿಯಲ್ಲಿ ರನ್ ಕಲೆಹಾಕಿದ್ದು ಅತ್ಯುತ್ತಮ ದಾಖಲೆಯಾಗಿತ್ತು. ಆದರೆ ಕಳೆದ ಬಾರಿ ಈ ದಾಖಲೆಯನ್ನು ಮುರಿಯಲಾಗಿದೆ.
9 / 11
ಡಬಲ್ ಸೆಂಚುರಿ ಚೇಸಿಂಗ್: ಐಪಿಎಲ್ 2023 ರಲ್ಲಿ 8 ಬಾರಿ 200 ಅಥವಾ ಅದಕ್ಕಿಂತ ಹೆಚ್ಚಿನ ರನ್ ಗುರಿ ಬೆನ್ನತ್ತಲಾಗಿದೆ. ಅದು ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಬಾರಿ ಎಂಬುದು ವಿಶೇಷ. ಈ ಹಿಂದೆ 2014 ರಲ್ಲಿ 3 ಬಾರಿ 200+ ಸ್ಕೋರ್ ಅನ್ನು ಚೇಸ್ ಮಾಡಿದ್ದು ದಾಖಲೆಯಾಗಿತ್ತು.
10 / 11
ಬೌಲರ್ಗಳ ದಾಖಲೆ: ಐಪಿಎಲ್ ಸೀಸನ್ವೊಂದರಲ್ಲಿ ಒಂದೇ ತಂಡದ ಮೂವರು ಬೌಲರ್‌ಗಳು 25 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿರುವುದು ಮೊದಲ ಬಾರಿ. ಗುಜರಾತ್ ಟೈಟಾನ್ಸ್ ಬೌಲರ್‌ಗಳಾದ ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ ಮತ್ತು ರಶೀದ್ ಖಾನ್ ಐಪಿಎಲ್ 2023 ರಲ್ಲಿ ಈ ಸಾಧನೆ ಮಾಡಿದ್ದಾರೆ.
11 / 11
ಅನ್ಕ್ಯಾಪ್ಡ್ ಆಟಗಾರರ ಸೆಂಚುರಿ: ಕಳೆದ ಬಾರಿ ಇಬ್ಬರು ಅನ್ ಕ್ಯಾಪ್ಡ್ ಭಾರತೀಯ ಆಟಗಾರರು ಶತಕ ಬಾರಿಸಿ ದಾಖಲೆ ಬರೆದಿದ್ದರು. ಇದು ಕೂಡ ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆಯಾಗಿತ್ತು. ಯಶಸ್ವಿ ಜೈಸ್ವಾಲ್ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಸೆಂಚುರಿ ಸಿಡಿಸಿ ಈ ವಿಶೇಷ ದಾಖಲೆ ನಿರ್ಮಿಸಿದ್ದರು.