AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸೋಲಿನ ಬೆನ್ನಲ್ಲೇ ರೋಹಿತ್ ಶರ್ಮಾ ಜೊತೆ ಆಕಾಶ್ ಅಂಬಾನಿ ಸುದೀರ್ಘ ಚರ್ಚೆ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ ಪಂದ್ಯವೊಂದರಲ್ಲಿ 240 ಕ್ಕಿಂತ ಅಧಿಕ ರನ್ ನೀಡಿದೆ. ಈ ರನ್​ಗಳೊಂದಿಗೆ ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ಬೌಲಿಂಗ್ ಪ್ರದರ್ಶನ ನೀಡಿದ ತಂಡವೆಂಬ ಅಪಖ್ಯಾತಿಯನ್ನೂ ಸಹ ಹಾರ್ದಿಕ್ ಪಾಂಡ್ಯ ಪಡೆ ತನ್ನದಾಗಿಸಿಕೊಂಡಿದೆ.

TV9 Web
| Edited By: |

Updated on: Mar 28, 2024 | 8:22 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲೇ ಅತ್ಯಂತ ಕೆಟ್ಟ ಬೌಲಿಂಗ್ ಪ್ರದರ್ಶನ ನೀಡಿದ ತಂಡ ಎಂಬ ಅಪಖ್ಯಾತಿ ಇದೀಗ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಪಾಲಾಗಿದೆ. ರಾಜೀವ್ ಗಾಂಧಿ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 277 ರನ್ ನೀಡುವ ಮೂಲಕ ಮುಂಬೈ ಇಂಡಿಯನ್ಸ್​ ಈ ಅಪಕೀರ್ತಿಯನ್ನು ತನ್ನದಾಗಿಸಿಕೊಂಡಿದೆ.

1 / 6
ಈ ಅಪಖ್ಯಾತಿಯೊಂದಿಗೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 31 ರನ್​ಗಳಿಂದ ಸೋಲನುಭವಿಸಿತು. ಈ ಸೋಲಿನ ಬೆನ್ನಲ್ಲೇ ಮುಂಬೈ ತಂಡದ ಮಾಲೀಕರಾದ ಆಕಾಶ್ ಅಂಬಾನಿ ರೋಹಿತ್ ಶರ್ಮಾ ಅವರನ್ನು ಭೇಟಿಯಾಗಿದ್ದು ವಿಶೇಷ. ಅಷ್ಟೇ ಅಲ್ಲದೆ ಸುದೀರ್ಘ ಚರ್ಚೆ ನಡೆಸುತ್ತಿರುವುದು ಕೂಡ ಕಂಡು ಬಂತು.

2 / 6
ಮುಂಬೈ ಇಂಡಿಯನ್ಸ್ ತಂಡ ಸೋಲುತ್ತಿದ್ದಂತೆ ಡಗೌಟ್​ನತ್ತ ಬಂದ ಆಕಾಶ್ ಅಂಬಾನಿ ರೋಹಿತ್ ಶರ್ಮಾ ಅವರೊಂದಿಗೆ ವಿಶೇಷ ಚರ್ಚೆ ನಡೆಸಿದರು. ಈ ಚರ್ಚೆಯು ಕೆಲ ಹೊತ್ತಿನವರೆಗೂ ಸಾಗಿದ್ದು ವಿಶೇಷ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 6
ಈ ಬಾರಿಯ ಐಪಿಎಲ್​ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ, ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಿದ್ದರು. ಆದರೆ ಮೊದಲೆರಡು ಪಂದ್ಯಗಳಲ್ಲೂ ಮುಂಬೈ ಇಂಡಿಯನ್ಸ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

4 / 6
ಅದರಲ್ಲೂ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ನೀಡಿದ ಅಪಖ್ಯಾತಿಯನ್ನು ಮುಂಬೈ ಇಂಡಿಯನ್ಸ್​ ತಂಡ ಮೈಮೇಲೆ ಎಳೆದುಕೊಂಡಿರುವುದು ಫ್ರಾಂಚೈಸಿಯ ಬೇಸರಕ್ಕೆ ಕಾರಣವಾಗಿದೆ. ಹೀಗಾಗಿಯೇ ಆಕಾಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರು ರೋಹಿತ್ ಶರ್ಮಾ ಅವರ ಜೊತೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.

5 / 6
ಸದ್ಯ ಆಕಾಶ್ ಅಂಬಾನಿ ಹಾಗೂ ರೋಹಿತ್ ಶರ್ಮಾ ನಡುವಣ ಚರ್ಚಾ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಇದು ನಾಯಕತ್ವದ ಬದಲಾವಣೆಯ ಮುನ್ಸೂಚನೆ ಎಂದು ಹಿಟ್​ಮ್ಯಾನ್ ಫ್ಯಾನ್ಸ್ ಫುಲ್ ಖುಷಿ ವ್ಯಕ್ತಪಡಿಸಲಾರಂಭಿಸಿದ್ದಾರೆ. ಅದರಂತೆ ಮುಂಬರುವ ಪಂದ್ಯಗಳಲ್ಲಿ ಪಾಂಡ್ಯ ಬದಲಿಗೆ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಲಿದ್ದಾರಾ ಕಾದು ನೋಡಬೇಕಿದೆ.

6 / 6
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್

ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು