IPL 2024: ಇಬ್ಬರು ಭಾರತೀಯರು: 10 ತಂಡಗಳ ಕೋಚ್ ಫೈನಲ್
TV9 Web | Updated By: ಝಾಹಿರ್ ಯೂಸುಫ್
Updated on:
Feb 25, 2024 | 3:10 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೆ ಡೇಟ್ ಫಿಕ್ಸ್ ಮಾಡಲಾಗಿದ್ದು, ಮಾರ್ಚ್ 22 ರಿಂದ ಐಪಿಎಲ್ ಶುರುವಾಗಲಿದೆ. ಮುಂಬುರವ ಲೋಕಸಭಾ ಚುನಾವಣೆ ನಿಮಿತ್ತ ಕೇವಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
1 / 12
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡಗಳ ನಾಯಕರಗಳನ್ನು ಹೆಸರಿಸಿದ್ದಾರೆ. ಇದೀಗ 10 ತಂಡಗಳ ತರಬೇತುದಾರರು ಯಾರು ಎಂಬುದು ಕೂಡ ಬಹಿರಂಗವಾಗಿದೆ.
2 / 12
ವಿಶೇಷ ಎಂದರೆ ಈ ಹತ್ತು ಕೋಚ್ಗಳಲ್ಲಿ ಕೇವಲ ಇಬ್ಬರು ಭಾರತೀಯರು ಮಾತ್ರ ಪ್ರಧಾನ ಹುದ್ದೆ ಅಲಂಕರಿಸಿದ್ದಾರೆ. ಅಂದರೆ ಐಪಿಎಲ್ನ 8 ತಂಡಗಳ ಸಾರಥ್ಯವನ್ನು ಫ್ರಾಂಚೈಸಿಗಳು ವಿದೇಶಿ ಕೋಚ್ಗಳಿಗೆ ಒಪ್ಪಿಸಿದ್ದಾರೆ. ಹಾಗಿದ್ರೆ ಈ ಬಾರಿಯ ಐಪಿಎಲ್ನಲ್ಲಿ ಕೋಚ್ಗಳಾಗಿ ಕಾಣಿಸಿಕೊಳ್ಳುವವರು ಯಾರು ಎಂಬುದನ್ನು ನೋಡೋಣ...
3 / 12
ಮುಂಬೈ ಇಂಡಿಯನ್ಸ್: ಸೌತ್ ಆಫ್ರಿಕಾ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಮಾರ್ಕ್ ಬೌಚರ್ ಈ ಬಾರಿ ಕೂಡ ಮುಂಬೈ ಇಂಡಿಯನ್ಸ್ ತಂಡ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಕಳೆದ ಸೀಸನ್ನಲ್ಲೂ ಮುಂಬೈ ತಂಡದ ಕೋಚ್ ಆಗಿ ಬೌಚರ್ ಕಾರ್ಯ ನಿರ್ವಹಿಸಿದ್ದರು.
4 / 12
ಚೆನ್ನೈ ಸೂಪರ್ ಕಿಂಗ್ಸ್: ಸಿಎಸ್ಕೆ ತಂಡದ ತರಬೇತಿಯ ಉಸ್ತುವಾರಿ ಈ ಬಾರಿ ಕೂಡ ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಸ್ಟೀಫನ್ ಫ್ಲೇಮಿಂಗ್ ಕೈಯಲ್ಲಿದೆ. ಕಳೆದ ಕೆಲ ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿ ಪಥದತ್ತ ಮುನ್ನಡೆಸಿರುವ ಫ್ಲೆಮಿಂಗ್ ಸಿಎಸ್ಕೆ ತಂಡದ ಬೆನ್ನೆಲುಬು ಎಂದರೆ ತಪ್ಪಾಗಲಾರದು.
5 / 12
ಸನ್ರೈಸರ್ಸ್ ಹೈದರಾಬಾದ್: ಎಸ್ಆರ್ಹೆಚ್ ತಂಡದ ಕೋಚ್ ಆಗಿ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದ ವೆಟ್ಟೋರಿ ಇದೀಗ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
6 / 12
ಡೆಲ್ಲಿ ಕ್ಯಾಪಿಟಲ್ಸ್: ಡೆಲ್ಲಿ ತಂಡದ ಕೋಚ್ ಆಗಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಮುಂದುವರೆದಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಆಗಿದ್ದ ಪಾಂಟಿಂಗ್ ಕಳೆದ ಕೆಲ ಸೀಸನ್ಗಳಿಂದ ಡೆಲ್ಲಿ ತಂಡದ ಸಾರಥ್ಯವಹಿಸಿಕೊಂಡಿದ್ದಾರೆ.
7 / 12
ಗುಜರಾತ್ ಟೈಟಾನ್ಸ್: ಗುಜರಾತ್ ಟೈಟಾನ್ಸ್ ತಂಡ ತಮ್ಮ ಕೋಚ್ ಅನ್ನು ಬದಲಿಸಿಲ್ಲ. ಟೀಮ್ ಇಂಡಿಯಾದ ಮಾಜಿ ಆಟಗಾರ ಆಶಿಶ್ ನೆಹ್ರಾ ಮುಖ್ಯ ಕೋಚ್ ಆಗಿ ಈ ಬಾರಿ ಕೂಡ ಮುಂದುವರೆದಿದ್ದಾರೆ.
8 / 12
ಲಕ್ನೋ ಸೂಪರ್ ಜೈಂಟ್ಸ್: ಲಕ್ನೋ ತಂಡದ ಹೊಸ ಕೋಚ್ ಆಗಿ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಜಸ್ಟಿನ್ ಲ್ಯಾಂಗರ್ ಆಯ್ಕೆಯಾಗಿದ್ದಾರೆ.
9 / 12
ರಾಜಸ್ಥಾನ್ ರಾಯಲ್ಸ್: ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ್ ಸಂಗಾಕ್ಕರ ಈ ಬಾರಿ ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಸ್ಥಾನದಲ್ಲಿ ಮುಂದುವರೆದಿದ್ದಾರೆ.
10 / 12
ಕೊಲ್ಕತ್ತಾ ನೈಟ್ ರೈಡರ್ಸ್: 6 ಬಾರಿ ರಣಜಿ ಟ್ರೋಫಿ ಗೆದ್ದುಕೊಟ್ಟ (ಮುಂಬೈ ಹಾಗೂ ಮಧ್ಯಪ್ರದೇಶ) ಯಶಸ್ವಿ ಕೋಚ್ ಖ್ಯಾತಿಯ ಚಂದ್ರಕಾಂತ್ ಪಂಡಿತ್ ಈ ಬಾರಿ ಕೂಡ ಕೆಕೆಆರ್ ತಂಡ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
11 / 12
ಪಂಜಾಬ್ ಕಿಂಗ್ಸ್: ಇಂಗ್ಲೆಂಡ್ ತಂಡಕ್ಕೆ ಏಕದಿನ ವಿಶ್ವಕಪ್ ಗೆದ್ದುಕೊಟ್ಟ ಕೋಚ್ ಟ್ರೆವರ್ ಬೇಲಿಸ್ ಅವರನ್ನು ಪಂಜಾಬ್ ಕಿಂಗ್ಸ್ ಮುಖ್ಯ ಕೋಚ್ ಆಗಿ ಮುಂದುವರೆಸಿದೆ.
12 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ತಂಡದ ಮುಖ್ಯ ಕೋಚ್ ಆಗಿ ಝಿಂಬಾಬ್ವೆ ತಂಡದ ಮಾಜಿ ಆಟಗಾರ ಆ್ಯಂಡಿ ಫ್ಲವರ್ ಆಯ್ಕೆಯಾಗಿದ್ದಾರೆ. ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ತರಬೇತುದಾರರಾಗಿದ್ದ ಫ್ಲವರ್ ಅವರನ್ನು ಈ ಬಾರಿ ಆರ್ಸಿಬಿ ಮುಖ್ಯ ಕೋಚ್ ಆಗಿ ನೇಮಿಸಿದೆ.