AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 41ನೇ ವಯಸ್ಸಿನಲ್ಲಿ ವಿಶೇಷ ದಾಖಲೆ ಬರೆದ ಅಮಿತ್ ಮಿಶ್ರಾ

Amit Mishra: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಒಂದು ವಿಕೆಟ್ ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ಹಿರಿಯ ಸ್ಪಿನ್ನರ್ ಅಮಿತ್ ಮಿಶ್ರಾ ವಿಶೇಷ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು 200 ವಿಕೆಟ್ ಪಡೆದಿರುವ ಯುಜ್ವೇಂದ್ರ ಚಹಲ್.

TV9 Web
| Edited By: |

Updated on: Apr 28, 2024 | 8:27 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 44ನೇ ಪಂದ್ಯದಲ್ಲಿ ಒಂದು ವಿಕೆಟ್ ಕಬಳಿಸಿ ಅಮಿತ್ ಮಿಶ್ರಾ ವಿಶೇಷ ದಾಖಲೆ ಬರೆದಿದ್ದಾರೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿತ್ತು.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ರಾಜಸ್ಥಾನ್ ರಾಯಲ್ಸ್ ಇನಿಂಗ್ಸ್​ ವೇಳೆ ಲಕ್ನೋ ಸೂಪರ್ ಜೈಂಟ್ಸ್ ಪರ ಅಮಿತ್ ಮಿಶ್ರಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು.

2 / 5
ಈ ವೇಳೆ ಎರಡು ಓವರ್​ಗಳನ್ನು ಬೌಲ್ ಮಾಡಿದ ಅಮಿತ್ ಮಿಶ್ರಾ 20 ರನ್ ನೀಡಿ 1 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಈ ವಿಕೆಟ್​ನೊಂದಿಗೆ ಐಪಿಎಲ್​ನಲ್ಲಿ ವಿಕೆಟ್ ಕಬಳಿಸಿದ ಅತ್ಯಂತ ಹಿರಿಯ ಬೌಲರ್​ ಎಂಬ ಹಿರಿಮೆಗೂ ಮಿಶ್ರಾ ಪಾತ್ರರಾದರು.

3 / 5
ಅಮಿತ್ ಮಿಶ್ರಾ ತಮ್ಮ 41ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದು, ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿಕೆಟ್ ಪಡೆದ ಅತ್ಯಂತ ಹಿರಿಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಒಂದು ವಿಕೆಟ್​ನೊಂದಿಗೆ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮಿಶ್ರಾ 4ನೇ ಸ್ಥಾನಕ್ಕೇರಿದ್ದಾರೆ.

4 / 5
ಐಪಿಎಲ್​ನ 162 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅಮಿತ್ ಮಿಶ್ರಾ ಈವರೆಗೆ 3371 ಎಸೆತಗಳನ್ನು ಎಸೆದಿದ್ದಾರೆ. ಇದೇ ವೇಳೆ 174 ವಿಕೆಟ್ ಕಬಳಿಸುವ ಮೂಲಕ ಲಸಿತ್ ಮಾಲಿಂಗ (173) ಅವರನ್ನು ಹಿಂದಿಕ್ಕಿ ಐಪಿಎಲ್ ವಿಕೆಟ್ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದ್ದಾರೆ.

5 / 5
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!

ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ

ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ

ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ

ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ

ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ