Andre Russell: ರಸೆಲ್ ಸಿಡಿಲಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

IPL 2024 KKR vs SRH: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್​ 2024) 3ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆ್ಯಂಡ್ರೆ ರಸೆಲ್ ಮಿಂಚಿದರೆ, ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ ಅಬ್ಬರಿಸಿದ್ದರು. ಈ ಮೂಲಕ ಐಪಿಎಲ್​ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ಒದಗಿಸುವಲ್ಲಿ ಇಬ್ಬರು ಸ್ಪೋಟಕ ದಾಂಡಿಗರು ಯಶಸ್ವಿಯಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Mar 24, 2024 | 6:23 AM

IPL 2024: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ (SRH)​ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಸ್ಪೋಟಕ ದಾಂಡಿಗ ಆ್ಯಂಡ್ರೆ ರಸೆಲ್ (Andre Russell) ಅಕ್ಷರಶಃ ಅಬ್ಬರಿಸಿದ್ದರು. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಲಿದ ರಸೆಲ್ ಕೇವಲ 25 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 64 ರನ್ ಬಾರಿಸಿ ಮಿಂಚಿದ್ದರು.

1 / 6
ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ರಸೆಲ್ ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಕ್ಸ್​ ಸಿಡಿಸುವ ಮೂಲಕವೇ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ ಬಾರಿಸಿದ 7 ಸಿಕ್ಸ್​​ನೊಂದಿಗೆ ರಸೆಲ್ ಐಪಿಎಲ್​ನಲ್ಲಿ 200 ಸಿಕ್ಸ್​ಗಳನ್ನು ಪೂರೈಸಿದ್ದಾರೆ.

2 / 6
ಈ ಮೂಲಕ ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ 9ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಅತೀ ವೇಗವಾಗಿ 200 ಸಿಕ್ಸ್​ಗಳನ್ನು ಪೂರೈಸಿದ ಬ್ಯಾಟ್ಸ್​​ಮನ್​ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 6
ಇದಕ್ಕೂ ಮುನ್ನ ಈ ದಾಖಲೆ ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಗೇಲ್ ಐಪಿಎಲ್​ನಲ್ಲಿ ಒಟ್ಟು 1811 ಎಸೆತಗಳನ್ನು ಎದುರಿಸಿ 200 ಸಿಕ್ಸ್​ಗಳ ಮೈಲುಗಲ್ಲು ದಾಟಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಆ್ಯಂಡ್ರೆ ರಸೆಲ್ ಹೊಸ ಇತಿಹಾಸ ಬರೆದಿದ್ದಾರೆ.

4 / 6
ಆ್ಯಂಡ್ರೆ ರಸೆಲ್ ಕೇವಲ 1322 ಎಸೆತಗಳಲ್ಲಿ 200 ಸಿಕ್ಸ್​ಗಳನ್ನು ಪೂರೈಸಿದ್ದು, ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳನ್ನು ಎದುರಿಸಿ 200 ಸಿಕ್ಸರ್​ಗಳನ್ನು ಸಿಡಿಸಿದ ಬ್ಯಾಟ್ಸ್​ಮನ್ ಎಂಬ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಆ್ಯಂಡ್ರೆ ರಸೆಲ್ ಬಾರಿಸಿದ ಅಜೇಯ 64 ರನ್​ಗಳ ನೆರವಿನಿಂದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 208 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಎಸ್​ಆರ್​ಹೆಚ್​ ತಂಡವು 7 ವಿಕೆಟ್ ನಷ್ಟಕ್ಕೆ 204 ರನ್​ ಬಾರಿಸಲಷ್ಟೇ ಶಕ್ತರಾದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈ ಪಂದ್ಯದಲ್ಲಿ 4 ರನ್​ಗಳ ರೋಚಕ ಜಯ ಸಾಧಿಸಿದೆ.

6 / 6

Published On - 6:22 am, Sun, 24 March 24

Follow us