AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andre Russell: ಭರ್ಜರಿ ದಾಖಲೆ ಬರೆದ ಆ್ಯಂಡ್ರೆ ರಸೆಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (ಐಪಿಎಲ್ 2024) ತನ್ನ ಎರಡನೇ ಪಂದ್ಯದಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದಿದ್ದ ಕೆಕೆಆರ್, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿದೆ. ಈ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆ್ಯಂಡ್ರೆ ರಸೆಲ್ ವಿಶೇಷ ದಾಖಲೆ ಬರೆದಿದ್ದಾರೆ.

TV9 Web
| Edited By: |

Updated on: Mar 30, 2024 | 8:03 AM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 10ನೇ ಪಂದ್ಯದ ಮೂಲಕ KKR ಆಟಗಾರ ಆ್ಯಂಡ್ರೆ ರಸೆಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ತಮ್ಮ ಆಲ್​ರೌಂಡರ್​ ಆಟದೊಂದಿಗೆ ಎಂಬುದು ವಿಶೇಷ. RCB ವಿರುದ್ಧದ ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದ ರಸೆಲ್ 29 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು.

1 / 5
ಈ ಎರಡು ವಿಕೆಟ್​ಗಳೊಂದಿಗೆ ಆ್ಯಂಡ್ರೆ ರಸೆಲ್ ಐಪಿಎಲ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 2000 ರನ್ಸ್ + 100 ವಿಕೆಟ್ ಪಡೆದ ಮೊದಲ ವಿದೇಶಿ ಆಟಗಾರ ಎಂಬ ದಾಖಲೆಯನ್ನು ರಸೆಲ್ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ 2ನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಬರೆದಿದ್ದು ರವೀಂದ್ರ ಜಡೇಜಾ. ಸಿಎಸ್​ಕೆ ಪರ ಆಡುತ್ತಿರುವ ಜಡ್ಡು ಐಪಿಎಲ್​ನಲ್ಲಿ 2724 ರನ್ ಕಲೆಹಾಕಿದ್ದಾರೆ. ಹಾಗೆಯೇ 152 ವಿಕೆಟ್ ಕಬಳಿಸಿ ವಿಶೇಷ ದಾಖಲೆ ಬರೆದಿದ್ದಾರೆ.

3 / 5
ಇದೀಗ ಈ ವಿಶೇಷ ದಾಖಲೆ ಪಟ್ಟಿಗೆ ಆ್ಯಂಡ್ರೆ ರಸೆಲ್ ಕೂಡ ಸೇರ್ಪಡೆಯಾಗಿದ್ದು, ಐಪಿಎಲ್​ನಲ್ಲಿ 2326 ರನ್​ಗಳ ಜೊತೆಗೆ 100 ವಿಕೆಟ್​ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ 2 ಸಾವಿರ ರನ್ಸ್ + 100 ವಿಕೆಟ್ ಕಬಳಿಸಿದ ಮೊದಲ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸುವ ಮೂಲಕ ಆ್ಯಂಡ್ರೆ ರಸೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 182 ರನ್​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಅಲ್ಲದೆ 183 ರನ್​ಗಳ ಟಾರ್ಗೆಟ್​ ಅನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 16.5 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ