Andre Russell: ಭರ್ಜರಿ ದಾಖಲೆ ಬರೆದ ಆ್ಯಂಡ್ರೆ ರಸೆಲ್
TV9 Web | Updated By: ಝಾಹಿರ್ ಯೂಸುಫ್
Updated on:
Mar 30, 2024 | 8:03 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (ಐಪಿಎಲ್ 2024) ತನ್ನ ಎರಡನೇ ಪಂದ್ಯದಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದಿದ್ದ ಕೆಕೆಆರ್, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿದೆ. ಈ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆ್ಯಂಡ್ರೆ ರಸೆಲ್ ವಿಶೇಷ ದಾಖಲೆ ಬರೆದಿದ್ದಾರೆ.
1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ (IPL 2024) 10ನೇ ಪಂದ್ಯದ ಮೂಲಕ KKR ಆಟಗಾರ ಆ್ಯಂಡ್ರೆ ರಸೆಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ತಮ್ಮ ಆಲ್ರೌಂಡರ್ ಆಟದೊಂದಿಗೆ ಎಂಬುದು ವಿಶೇಷ. RCB ವಿರುದ್ಧದ ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದ ರಸೆಲ್ 29 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು.
2 / 5
ಈ ಎರಡು ವಿಕೆಟ್ಗಳೊಂದಿಗೆ ಆ್ಯಂಡ್ರೆ ರಸೆಲ್ ಐಪಿಎಲ್ನಲ್ಲಿ 100 ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 2000 ರನ್ಸ್ + 100 ವಿಕೆಟ್ ಪಡೆದ ಮೊದಲ ವಿದೇಶಿ ಆಟಗಾರ ಎಂಬ ದಾಖಲೆಯನ್ನು ರಸೆಲ್ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ 2ನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.
3 / 5
ಇದಕ್ಕೂ ಮುನ್ನ ಈ ದಾಖಲೆ ಬರೆದಿದ್ದು ರವೀಂದ್ರ ಜಡೇಜಾ. ಸಿಎಸ್ಕೆ ಪರ ಆಡುತ್ತಿರುವ ಜಡ್ಡು ಐಪಿಎಲ್ನಲ್ಲಿ 2724 ರನ್ ಕಲೆಹಾಕಿದ್ದಾರೆ. ಹಾಗೆಯೇ 152 ವಿಕೆಟ್ ಕಬಳಿಸಿ ವಿಶೇಷ ದಾಖಲೆ ಬರೆದಿದ್ದಾರೆ.
4 / 5
ಇದೀಗ ಈ ವಿಶೇಷ ದಾಖಲೆ ಪಟ್ಟಿಗೆ ಆ್ಯಂಡ್ರೆ ರಸೆಲ್ ಕೂಡ ಸೇರ್ಪಡೆಯಾಗಿದ್ದು, ಐಪಿಎಲ್ನಲ್ಲಿ 2326 ರನ್ಗಳ ಜೊತೆಗೆ 100 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ 2 ಸಾವಿರ ರನ್ಸ್ + 100 ವಿಕೆಟ್ ಕಬಳಿಸಿದ ಮೊದಲ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ.
5 / 5
ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸುವ ಮೂಲಕ ಆ್ಯಂಡ್ರೆ ರಸೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 182 ರನ್ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಅಲ್ಲದೆ 183 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 16.5 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.