IPL 2024: ಯಶ್ ದಯಾಳ್ RCB ಗೆ ಪಂದ್ಯ ಗೆಲ್ಲಿಸಿ ಕೊಡ್ತಾರೆ..!

| Updated By: ಝಾಹಿರ್ ಯೂಸುಫ್

Updated on: Dec 25, 2023 | 3:28 PM

IPL 2024 RCB: ಈ ಬಾರಿಯ ಐಪಿಎಲ್ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 6 ಆಟಗಾರರನ್ನು ಖರೀದಿಸಿದೆ. ಅದರಂತೆ ಐಪಿಎಲ್​ ಸೀಸನ್​-17 ರಲ್ಲಿ ಆರ್​ಸಿಬಿ 25 ಸದಸ್ಯರ ಬಳಗದೊಂದಿಗೆ ಕಾಣಿಸಿಕೊಳ್ಳಲಿದೆ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಬಲಿಷ್ಠ ತಂಡವನ್ನು ರೂಪಿಸಿದೆ. ಮಿನಿ ಆಕ್ಷನ್​ಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಆರ್​ಸಿಬಿ ಹರಾಜಿನ ಮೂಲಕ 6 ಆಟಗಾರರನ್ನು ಖರೀದಿಸಿದೆ.

2 / 6
ಹೀಗೆ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ಆಟಗಾರರಲ್ಲಿ ಎಲ್ಲರ ಅಚ್ಚರಿಗೆ ಕಾರಣವಾಗಿದ್ದು ಅಲ್ಝಾರಿ ಜೋಸೆಫ್ ಹಾಗೂ ಯಶ್ ದಯಾಳ್. ವೆಸ್ಟ್ ಇಂಡೀಸ್​ ವೇಗಿಯನ್ನು ಆರ್​ಸಿಬಿ ಬರೋಬ್ಬರಿ 11.50 ಕೋಟಿ ರೂ.ಗೆ ಖರೀದಿಸಿದರೆ, ಯಶ್ ದಯಾಳ್ ಅವರ ಆಯ್ಕೆಗಾಗಿ 5 ಕೋಟಿ ರೂ. ವ್ಯಯಿಸಿತ್ತು.

3 / 6
ಈ ಇಬ್ಬರು ಬೌಲರ್​ಗಳ ಆಯ್ಕೆ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಅಪಸ್ವರಗಳು ಕೇಳಿ ಬಂದಿದ್ದವು. ಅದರಲ್ಲೂ ಯಶ್ ದಯಾಳ್​ಗಾಗಿ ಐದು ಕೋಟಿ ಸುರಿದಿರುವ ಆರ್​ಸಿಬಿ ಮ್ಯಾನೇಜ್ಮೆಂಟ್ ನಡೆಯ ಬಗ್ಗೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು.

4 / 6
ಇದೀಗ ಯಶ್ ದಯಾಳ್​ ಅವರ ಖರೀದಿ ಬಗ್ಗೆ ಆರ್​ಸಿಬಿ ತಂಡದ ಕೋಚ್ ಆ್ಯಂಡಿ ಫ್ಲವರ್ ಮಾತನಾಡಿದ್ದಾರೆ. ಕಳೆದ ವರ್ಷ ನಾವು ಯಶ್ ಅವರ ಬೌಲಿಂಗ್ ಸಾಮರ್ಥ್ಯವನ್ನು ನಾವು ನೋಡಿದ್ದೇವೆ. ಖಂಡಿತವಾಗಿಯೂ ಅವರು ಹೊಸ ಚೆಂಡಿನಲ್ಲಿ ಸ್ವಿಂಗ್ ಬೌಲಿಂಗ್ ಮೂಲಕ ವಿಕೆಟ್ ಪಡೆಯುವ ಸಾಮರ್ಥ್ಯ ಹೊಂದಿದ್ದಾರೆ.

5 / 6
ಅದರಂತೆ ಈ ಬಾರಿ ಯಶ್ ದಯಾಳ್​ ಆರ್​ಸಿಬಿ ತಂಡಕ್ಕೆ ಪಂದ್ಯ ಗೆಲ್ಲಿಸಿಕೊಡುವ ವಿಶ್ವಾಸವಿದೆ ಎಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನೂತನ ಕೋಚ್ ಆ್ಯಂಡಿ ಫ್ಲವರ್ ತಿಳಿಸಿದ್ದಾರೆ.

6 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.