AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: KKR ತಂಡದಿಂದ ಹೊರ ನಡೆದ ಫಿಲ್ ಸಾಲ್ಟ್

IPL 2024: ಐಪಿಎಲ್​ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಒಂದು ಮ್ಯಾಚ್ ರದ್ದಾದರೆ, ಉಳಿದ 12 ಪಂದ್ಯಗಳಲ್ಲಿ ಕೆಕೆಆರ್ 9 ಜಯ ಸಾಧಿಸಿದೆ. ಈ ಮೂಲಕ 19 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಅಲ್ಲದೆ ಮೇ 21 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ತಂಡ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on:May 15, 2024 | 2:48 PM

Share
IPL 2024: ಐಪಿಎಲ್ ಸೀಸನ್ 17 ರಲ್ಲಿ ಪ್ಲೇಆಫ್ ಪ್ರವೇಶಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಿಂದ ಸ್ಪೋಟಕ ದಾಂಡಿಗ ಫಿಲ್ ಸಾಲ್ಟ್ (Phil Salt) ಹೊರ ನಡೆದಿದ್ದಾರೆ. ಮೇ 21 ರಿಂದ ಪಾಕಿಸ್ತಾನ್ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿ ಶುರುವಾಗಲಿದ್ದು, ಈ ಸರಣಿಯಲ್ಲಿ ಭಾಗವಹಿಸಲು ಇಂಗ್ಲೆಂಡ್ ದಾಂಡಿಗ ಇದೀಗ ತವರಿಗೆ ಮರಳಿದ್ದಾರೆ.

1 / 6
ಇದರೊಂದಿಗೆ ಕೆಕೆಆರ್ ತಂಡದ ಪ್ಲೇಆಫ್ ಪಂದ್ಯಗಳಿಗೆ ಫಿಲ್ ಸಾಲ್ಟ್ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಇತ್ತ ಸಾಲ್ಟ್ ಅಲಭ್ಯತೆಯು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟಿಂಗ್ ಲೈನಪ್ ಮೇಲೆ ಪರಿಣಾಮ ಬೀರಬಹುದು.

2 / 6
ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಫಿಲ್ ಸಾಲ್ಟ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸ್ಪೋಟಕ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದರು. ಸುನಿಲ್ ನರೈನ್ ಜೊತೆಗೂಡಿ ಇನಿಂಗ್ಸ್ ಆರಂಭಿಸಿದ್ದ ಸಾಲ್ಟ್ 12 ಇನಿಂಗ್ಸ್​ಗಳಿಂದ ಒಟ್ಟು 435 ರನ್ ಕಲೆಹಾಕಿದ್ದರು. ಈ ವೇಳೆ 4 ಸ್ಪೋಟಕ ಹಾಫ್ ಸೆಂಚುರಿ ಬಾರಿಸಿ ಅಬ್ಬರಿಸಿದ್ದರು.

3 / 6
ಅಷ್ಟೇ ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಒಂದೇ ಸೀಸನ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ಬರೆದಿದ್ದರು. ಈಡನ್ ಗಾರ್ಡನ್ಸ್​ನಲ್ಲಿ 6 ಇನಿಂಗ್ಸ್ ಆಡಿರುವ ಫಿಲ್ ಸಾಲ್ಟ್ ಒಟ್ಟು 343 ರನ್​ ಚಚ್ಚಿದ್ದಾರೆ. ಈ ಮೂಲಕ 14 ವರ್ಷಗಳಿಂದ ಸೌರವ್ ಗಂಗೂಲಿ (331) ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದರು.

4 / 6
ಇದೀಗ ನಿರ್ಣಾಯಕವಾಗಿರುವ ಪ್ಲೇಆಫ್ ಪಂದ್ಯಗಳಿಗೂ ಮುನ್ನ ಫಿಲ್ ಸಾಲ್ಟ್ ತಂಡವನ್ನು ತೊರೆದಿರುವುದು ಕೆಕೆಆರ್ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡಲಿದೆ. ಇನ್ನು ಸಾಲ್ಟ್ ಅಲಭ್ಯತೆಯ ನಡುವೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ರಹಮಾನುಲ್ಲಾ ಗುರ್ಬಾಝ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

5 / 6
ಕೊಲ್ಕತ್ತಾ ನೈಟ್ ರೈಡರ್ಸ್ ತಂಡ: ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಅಂಗ್​ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣ್​ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಸುಯಶ್ ಶರ್ಮಾ, ಅನುಕುಲ್ ರಾಯ್, ಮನೀಶ್ ಪಾಂಡೆ, ರಹಮಾನುಲ್ಲಾ ಗುರ್ಬಾಝ್, ರಿಂಕು ಸಿಂಗ್, ಅಲ್ಲಾ ಗಜನ್ಫರ್, ಸಾಕಿಬ್ ಹುಸೇನ್, ಶೆರ್ಫಾನೆ ರುದರ್ಫೋರ್ಡ್, ಚೇತನ್ ಸಕರಿಯಾ, ನಿತೀಶ್ ರಾಣಾ, ಶ್ರೀಕರ್ ಭರತ್, ದುಷ್ಮಂತ ಚಮೀರಾ.

6 / 6

Published On - 2:08 pm, Tue, 14 May 24

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು

‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್

2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ

ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ

ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ

VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ