IPL 2024: ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದ CSK

| Updated By: ಝಾಹಿರ್ ಯೂಸುಫ್

Updated on: Apr 24, 2024 | 9:22 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 39ನೇ ಪಂದ್ಯದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಭಾರತ ತಂಡದ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಸಿಎಸ್​ಕೆ ನಿರ್ಮಿಸಿದ ಹೊಸ ದಾಖಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 5
ಐಪಿಎಲ್​ನ (IPL 2024) 39ನೇ ಪಂದ್ಯದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಟೀಮ್ ಇಂಡಿಯಾದ (Team India) ವಿಶ್ವ ದಾಖಲೆಯೊಂದನ್ನು ಮುರಿದಿದೆ. ಅದು ಸಹ 200+ ಸ್ಕೋರ್​ ಬಾರಿಸುವ ಮೂಲಕ ಎಂಬುದು ವಿಶೇಷ.

2 / 5
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ಪರ ನಾಯಕ ರುತುರಾಜ್ ಗಾಯಕ್ವಾಡ್ (108) ಅಜೇಯ ಶತಕ ಬಾರಿಸಿ ಮಿಂಚಿದರು. ಈ ಸೆಂಚುರಿ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 210 ರನ್ ಕಲೆಹಾಕಿತು.

3 / 5
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 200 ಕ್ಕಿಂತ ಅಧಿಕ ರನ್ ಕಲೆಹಾಕಿದ ಟೀಮ್ ಇಂಡಿಯಾದ ದಾಖಲೆಯನ್ನು ಚೆನ್ನೈ ಸೂಪರ್ ಕಿಂಗ್ಸ್ ಮುರಿದಿರುವುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡವು ಈವರೆಗೆ 32 ಬಾರಿ 200+ ಸ್ಕೋರ್​ ಗಳಿಸಿ ದಾಖಲೆ ಬರೆದಿತ್ತು. ಆದರೆ ಈ ಬಾರಿಯ ಐಪಿಎಲ್​ನಲ್ಲಿ CSK ತಂಡವು ಮೂರು ಬಾರಿ 200+ ಸ್ಕೋರ್​ ಕಲೆಹಾಕಿ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದೆ.

4 / 5
ಗುಜರಾತ್ ಟೈಟಾನ್ಸ್ ವಿರುದ್ಧ 206 ರನ್ ಬಾರಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 206 ರನ್​ ಕಲೆಹಾಕಿತ್ತು. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 210 ರನ್​ ಬಾರಿಸುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 34 ಬಾರಿ 200+ ಸ್ಕೋರ್​ಗಳಿಸಿದ ತಂಡ ಎನಿಸಿಕೊಂಡಿದೆ.

5 / 5
ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 200 ಕ್ಕಿಂತ ಅಧಿಕ ರನ್ ಕಲೆಹಾಕಿದ ತಂಡವೆಂಬ ವಿಶ್ವ ದಾಖಲೆಯನ್ನು ಚೆನ್ನೈ ಸೂಪರ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ.