IPL 2024: CSK ತಂಡ ನೇರವಾಗಿ ಫೈನಲ್ ಆಡಲಿ: ಅಂಬಾಟಿ ರಾಯುಡು
TV9 Web | Updated By: ಝಾಹಿರ್ ಯೂಸುಫ್
Updated on:
Apr 01, 2024 | 7:58 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಇದುವರೆಗೆ ಮೂರು ಪಂದ್ಯಗಳನ್ನಾಡಿರುವ ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆರ್ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದ್ದ ಸಿಎಸ್‌ಕೆ ಆ ಬಳಿಕ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು ಬೀಗಿತ್ತು.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಪ್ರದರ್ಶನ ಮುಂದುವರೆಸಿದೆ. ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಬೀಗಿದ್ದ ಸಿಎಸ್‌ಕೆ ತಂಡವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 20 ರನ್ಗಳಿಂದ ಸೋಲನುಭವಿಸಿದೆ. ಇದಾಗ್ಯೂ ಈ ಪಂದ್ಯದಲ್ಲಿ ಚೆನ್ನೈ ತಂಡವು ಕಳಪೆ ಪ್ರದರ್ಶನ ನೀಡಿಲ್ಲ ಎಂಬುದು ವಿಶೇಷ.
2 / 5
ಇದೇ ಕಾರಣದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹಾಡಿ ಹೊಗಳಿರುವ ಮಾಜಿ ಆಟಗಾರ ಅಂಬಾಟಿ ರಾಯುಡು, ಸಿಎಸ್‌ಕೆ ತಂಡವು ಮೊದಲ ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದಿದೆ. ಎಂಎಸ್ ಧೋನಿ ನಾಯಕನಲ್ಲದಿದ್ದರೂ, ಚೆನ್ನೈ ತಂಡಕ್ಕೆ ಯಾವುದೇ ಸಮಸ್ಯೆಯಾಗುತ್ತಿಲ್ಲ ಎಂಬುದನ್ನು ಗಮನಿಸಬೇಕು. ರುತುರಾಜ್ ಗಾಯಕ್ವಾಡ್ ಉತ್ತಮವಾಗಿ ಸಿಎಸ್‌ಕೆ ತಂಡವನ್ನು ಮುನ್ನಡೆಸುತ್ತಿದ್ದಾರೆ.
3 / 5
ಅಲ್ಲದೆ ಸಿಎಸ್‌ಕೆ ತಂಡದ ಒಂದೆರಡು ಪ್ರಮುಖ ಆಟಗಾರರು ಗಾಯಾಳುಗಳಾಗಿದ್ದಾರೆ. ಇದರ ಹೊರತಾಗಿಯೂ ಆಟದ ಎಲ್ಲಾ ವಿಭಾಗಗಳಲ್ಲಿ ಚೆನ್ನೈ ತಂಡ ಈಗಲೂ ಬಲಿಷ್ಠವಾಗಿ ಕಾಣುತ್ತಿದೆ. ಈ ಎಲ್ಲಾ ಕಾರಣಗಳಿಂದ ಇತರ ಫ್ರಾಂಚೈಸಿಗಳು ಸಿಎಸ್‌ಕೆ ತಂಡನ್ನು ಸೋಲಿಸುವುದು ಕಷ್ಟ ಎಂದು ರಾಯುಡು ಹೇಳಿದ್ದಾರೆ.
4 / 5
ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿರುವ ಸಿಎಸ್‌ಕೆ ವಿರುದ್ಧ ಲೀಗ್ ಪಂದ್ಯಗಳನ್ನಾಡುವುದು ಸಮಯ ವ್ಯರ್ಥ. ನನ್ನ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್‌ಗೆ ನೇರವಾಗಿ ಫೈನಲ್ ಆಡಲು ಅವಕಾಶ ನೀಡಬೇಕು. ಇತರ ಫ್ರಾಂಚೈಸಿಗಳು ಲೀಗ್ ಹಂತದಲ್ಲಿ ಸ್ಪರ್ಧಿಸಿ ಫೈನಲ್ಗೆ ಬರಲಿ. ಏಕೆಂದರೆ ಸಿಎಸ್‌ಕೆ ಫೈನಲ್ ಆಡುವುದಂತು ಖಚಿತ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.
5 / 5
ಅಂದಹಾಗೆ ಐಪಿಎಲ್ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಬಾರಿ ಕೂಡ ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿದೆ. ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಹಾಲಿ ಚಾಂಪಿಯನ್ ಸಿಎಸ್‌ಕೆ ತಂಡ ಈ ಬಾರಿ ಕೂಡ ಪ್ಲೇಆಫ್ ಪ್ರವೇಶಿಸುವುದನ್ನು ಎದುರು ನೋಡಬಹುದು.