IPL 2024 CSK vs RR: RCB ಪಾಲಿಗೆ ಇಂದು ಯಾರು ಗೆಲ್ಲಬೇಕು?
IPL 2024: ಐಪಿಎಲ್ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಐಪಿಎಲ್ನ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಆರ್ಸಿಬಿ ಗೆದ್ದರೆ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ. ಆದರೆ ಅದಕ್ಕೂ ಮುನ್ನ ಆರ್ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಗೆಲ್ಲಬೇಕಿದೆ.
1 / 5
ಐಪಿಎಲ್ (IPL 2024) ಸೀಸನ್ 17ರ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ತುಂಬಾ ಮಹತ್ವದ್ದು. ಅದರಲ್ಲೂ ಆರ್ಸಿಬಿ ಪಾಲಿಗೂ ನಿರ್ಣಾಯಕ.
2 / 5
ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಪ್ಲೇಆಫ್ ಹಂತಕ್ಕೇರುವ ಹಾದಿ ಸುಗಮವಾಗಲಿದೆ. ಮತ್ತೊಂದೆಡೆ ಇದೇ ಪಂದ್ಯದ ಫಲಿತಾಂಶ ಆರ್ಸಿಬಿ ತಂಡದ ಪ್ಲೇಆಫ್ ಕನಸನ್ನು ಕೂಡ ನಿರ್ಧರಿಸಲಿದೆ.
3 / 5
ಅಂದರೆ ಈ ಮ್ಯಾಚ್ನಲ್ಲಿ ಸಿಎಸ್ಕೆ ತಂಡ ಗೆದ್ದರೆ ಒಟ್ಟು 14 ಅಂಕಗಳನ್ನು ಕಲೆಹಾಕಲಿದೆ. ಅದೇ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಸಿಎಸ್ಕೆ ತಂಡದ ಪಾಯಿಂಟ್ಸ್ 12ರಲ್ಲೇ ಉಳಿಯಲಿದೆ. ಇತ್ತ ಆರ್ಸಿಬಿ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಒಟ್ಟು 12 ಪಾಯಿಂಟ್ಸ್ ಸಂಪಾದಿಸಲಿದೆ.
4 / 5
ಇದರಿಂದ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್ಸಿಬಿ ತಂಡದ ಪಾಯಿಂಟ್ಸ್ ಸಮಗೊಳ್ಳಲಿದೆ. ಹೀಗೆ ಪಾಯಿಂಟ್ಸ್ ಸಮಗೊಂಡರೆ ಆರ್ಸಿಬಿ ತಂಡಕ್ಕೆ ಕೊನೆಯ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಹಂತಕ್ಕೇರುವ ಅವಕಾಶ ಹೆಚ್ಚಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್ಸಿಬಿ ಎದುರು ನೋಡಲಿದೆ.
5 / 5
ಒಂದು ವೇಳೆ ಇಂದು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ, ಪ್ಲೇಆಫ್ ಹಂತಕ್ಕೇರಲು ಆರ್ಸಿಬಿ ಹಾಗೂ ಸಿಎಸ್ಕೆ ನಡುವೆ ನಾಕೌಟ್ ಪಂದ್ಯ ನಡೆಯಬಹುದು. ಅಂದರೆ ಆರ್ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಿ 12 ಅಂಕಗಳನ್ನು ಪಡೆದುಕೊಂಡರೆ, ತನ್ನ ಕೊನೆಯ ಪಂದ್ಯದಲ್ಲಿ ಸಿಎಸ್ಕೆ ತಂಡವನ್ನು ಎದುರಿಸಲಿದೆ. ಇದರಿಂದ ಸಿಎಸ್ಕೆ ಮತ್ತು ಆರ್ಸಿಬಿ ನಡುವೆ ಪ್ಲೇಆಫ್ ಎಂಟ್ರಿ ಫೈಟ್ ಕಂಡು ಬರಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ. ಈ ಮೂಲಕ ಸಿಎಸ್ಕೆ ವಿರುದ್ಧ ಗೆದ್ದು ಆರ್ಸಿಬಿ ಪ್ಲೇಆಫ್ ಪ್ರವೇಶಿಸಬಹುದು. ಈ ಎಲ್ಲಾ ಕಾರಣಗಳಿಂದಾಗಿ ಇಂದಿನ ಪಂದ್ಯದಲ್ಲಿ ಆರ್ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲಲೇಬೇಕು.
Published On - 10:28 am, Sun, 12 May 24