IPL 2024: CSK ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರ ಐಪಿಎಲ್ನಿಂದ ಔಟ್..!
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 17ನೇ ಆವೃತ್ತಿಗೆ ಮಾರ್ಚ್ 22 ರಂದು ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. IPL 2024 ರ ಮೊದಲ ಪಂದ್ಯಕ್ಕೆ ಸಿಎಸ್ಕೆ ತಂಡದ ಸ್ಟಾರ್ ಆಟಗಾರ ಡೆವೊನ್ ಕಾನ್ವೆ ಅಲಭ್ಯರಾಗುವುದು ಖಚಿತವಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ಸಿಎಸ್ಕೆ ತಂಡದ ಸ್ಟಾರ್ ಆಟಗಾರ ಈ ಬಾರಿಯ ಐಪಿಎಲ್ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.
1 / 6
ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ (Devon Conway) ಗಾಯಗೊಂಡಿದ್ದು, ಅವರು ಮೇ ತಿಂಗಳ ತನಕ ಮೈದಾನಕ್ಕಿಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್ಗೆ ಕಾನ್ವೆ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.
2 / 6
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ವೇಳೆ ನ್ಯೂಝಿಲೆಂಡ್ ಆಟಗಾರ ಡೆವೊನ್ ಕಾನ್ವೆ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಇದೀಗ ವೈದ್ಯಕೀಯ ವರದಿಯಲ್ಲಿ ಶಸ್ತ್ರಚಿಕಿತ್ಸೆ ಅನಿವಾರ್ಯ ಎಂದು ತಿಳಿದು ಬಂದಿದ್ದು, ಹೀಗಾಗಿ ಈ ವಾರ ಅವರು ಸರ್ಜರಿಗೆ ಒಳಗಾಗಲಿದ್ದಾರೆ. ಅಲ್ಲದೆ ಕನಿಷ್ಠ ಎಂಟು ವಾರಗಳವರೆಗೆ ಅವರು ವಿಶ್ರಾಂತಿ ಪಡೆಯಲಿದ್ದಾರೆ.
3 / 6
ಅಂದರೆ ಮೇ ತಿಂಗಳ ತನಕ ಡೆವೊನ್ ಕಾನ್ವೆ ಕಣಕ್ಕಿಳಿಯುವುದಿಲ್ಲ. ಇತ್ತ ಐಪಿಎಲ್ ಮಾರ್ಚ್ 22 ರಿಂದ ಶುರುವಾಗಲಿದ್ದು, ಮೇ ತಿಂಗಳಾಂತ್ಯದಲ್ಲಿ ಮುಗಿಯಲಿದೆ. ಹಾಗೆಯೇ ಟಿ20 ವಿಶ್ವಕಪ್ ಜೂನ್ 1 ರಿಂದ ಆರಂಭವಾಗಲಿದೆ.
4 / 6
ಹೀಗಾಗಿ ಕಾನ್ವೆ ಐಪಿಎಲ್ನಿಂದ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಸಂಪೂರ್ಣ ಫಿಟ್ನೆಸ್ನೊಂದಿಗೆ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಅದರಂತೆ ಈ ಬಾರಿಯ ಐಪಿಎಲ್ನಲ್ಲಿ ಸಿಎಸ್ಕೆ ಪರ ಹೊಸ ಆರಂಭಿಕ ಆಟಗಾರ ಇನಿಂಗ್ಸ್ ಆರಂಭಿಸಲಿದ್ದಾರೆ.
5 / 6
ಕಳೆದ ಐಪಿಎಲ್ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 16 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಡೆವೊನ್ ಕಾನ್ವೆ 6 ಅರ್ಧಶತಕಗಳೊಂದಿಗೆ ಒಟ್ಟು 672 ರನ್ ಕಲೆಹಾಕಿದ್ದರು. ಈ ಮೂಲಕ ಸಿಎಸ್ಕೆ ತಂಡವು ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಈ ಬಾರಿ ಅವರ ಅಲಭ್ಯತೆಯು ಸಿಎಸ್ಕೆ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು.