AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡದ ಸ್ಟಾರ್ ಆಲ್​ರೌಂಡರ್​ಗೆ ಗಾಯ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಆದರೆ ಅದಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ಸಿಎಸ್​ಕೆ ತಂಡದ ಪ್ರಮುಖ ಆಲ್​ರೌಂಡರ್ ರಣಜಿ ಟೂರ್ನಿಯ ವೇಳೆ ಗಾಯಗೊಂಡು. ಇದೀಗ ಸಂಪೂರ್ಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 20, 2024 | 12:54 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನವೇ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್​ರೌಂಡರ್ ಶಿವಂ ದುಬೆ (Shivam Dube) ರಣಜಿ ಟ್ರೋಫಿ ಪಂದ್ಯದ ವೇಳೆ ಗಾಯಗೊಂಡಿದ್ದಾರೆ.

1 / 6
ರಣಜಿ ಟೂರ್ನಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ಶಿವಂ ದುಬೆ ಸೈಡ್ ಸ್ಟ್ರೈನ್ ಸಮಸ್ಯೆಗೆ ಒಳಗಾಗಿದ್ದಾರೆ. ಫಿಟ್​ನೆಸ್ ಸಮಸ್ಯೆ ಕಾರಣ ಇದೀಗ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇತ್ತ ನಿರ್ಣಾಯಕ ಹಂತದ ವೇಳೆ ಶಿವಂ ದುಬೆ ಅವರ ಅನುಪಸ್ಥಿತಿ ಮುಂಬೈ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.

2 / 6
ಏಕೆಂದರೆ ಈ ಬಾರಿಯ ರಣಜಿ ಟೂರ್ನಿಯಲ್ಲಿ ಶಿವಂ ದುಬೆ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದರು. ಆಡಿದ ಐದು ಪಂದ್ಯಗಳಲ್ಲಿ ಎರಡು ಶತಕಗಳು ಮತ್ತು 2 ಅರ್ಧ ಶತಕಗಳನ್ನು ಬಾರಿಸಿದ್ದರು. ಈ ಮೂಲಕ 67.83 ಸರಾಸರಿಯಲ್ಲಿ 407 ರನ್ ಹಾಗೂ 12 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ನಾಕೌಟ್ ಹಂತದಿಂದ ದುಬೆ ಹೊರಗುಳಿದಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

3 / 6
ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರ ಅದ್ಭುತ ಪ್ರದರ್ಶನ ನೀಡಿದವರಲ್ಲಿ ಶಿವಂ ದುಬೆ ಕೂಡ ಒಬ್ಬರು. ಐಪಿಎಲ್ 2023ರಲ್ಲಿ 418 ರನ್ ಬಾರಿಸಿದ್ದ ದುಬೆ ಸಿಎಸ್​ಕೆ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

4 / 6
ಇದೀಗ ಐಪಿಎಲ್ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್ ಗಾಯಗೊಂಡಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಇದಾಗ್ಯೂ ಅವರು ಐಪಿಎಲ್​ನಿಂದ ಹೊರಗುಳಿಯಲಿದ್ದಾರಾ ಎಂಬುದು ವೈದ್ಯಕೀಯ ವರದಿ ಕೈ ಸೇರಿದ ಬಳಿಕವಷ್ಟೇ ನಿರ್ಧಾರವಾಗಲಿದೆ.

5 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

6 / 6
Follow us