ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನವೇ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್ರೌಂಡರ್ ಶಿವಂ ದುಬೆ (Shivam Dube) ರಣಜಿ ಟ್ರೋಫಿ ಪಂದ್ಯದ ವೇಳೆ ಗಾಯಗೊಂಡಿದ್ದಾರೆ.
ರಣಜಿ ಟೂರ್ನಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ಶಿವಂ ದುಬೆ ಸೈಡ್ ಸ್ಟ್ರೈನ್ ಸಮಸ್ಯೆಗೆ ಒಳಗಾಗಿದ್ದಾರೆ. ಫಿಟ್ನೆಸ್ ಸಮಸ್ಯೆ ಕಾರಣ ಇದೀಗ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇತ್ತ ನಿರ್ಣಾಯಕ ಹಂತದ ವೇಳೆ ಶಿವಂ ದುಬೆ ಅವರ ಅನುಪಸ್ಥಿತಿ ಮುಂಬೈ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.
ಏಕೆಂದರೆ ಈ ಬಾರಿಯ ರಣಜಿ ಟೂರ್ನಿಯಲ್ಲಿ ಶಿವಂ ದುಬೆ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದರು. ಆಡಿದ ಐದು ಪಂದ್ಯಗಳಲ್ಲಿ ಎರಡು ಶತಕಗಳು ಮತ್ತು 2 ಅರ್ಧ ಶತಕಗಳನ್ನು ಬಾರಿಸಿದ್ದರು. ಈ ಮೂಲಕ 67.83 ಸರಾಸರಿಯಲ್ಲಿ 407 ರನ್ ಹಾಗೂ 12 ವಿಕೆಟ್ಗಳನ್ನು ಕಬಳಿಸಿದ್ದಾರೆ. ಇದೀಗ ನಾಕೌಟ್ ಹಂತದಿಂದ ದುಬೆ ಹೊರಗುಳಿದಿರುವುದು ಸಿಎಸ್ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.
ಕಳೆದ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅದ್ಭುತ ಪ್ರದರ್ಶನ ನೀಡಿದವರಲ್ಲಿ ಶಿವಂ ದುಬೆ ಕೂಡ ಒಬ್ಬರು. ಐಪಿಎಲ್ 2023ರಲ್ಲಿ 418 ರನ್ ಬಾರಿಸಿದ್ದ ದುಬೆ ಸಿಎಸ್ಕೆ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಇದೀಗ ಐಪಿಎಲ್ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್ ಗಾಯಗೊಂಡಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಇದಾಗ್ಯೂ ಅವರು ಐಪಿಎಲ್ನಿಂದ ಹೊರಗುಳಿಯಲಿದ್ದಾರಾ ಎಂಬುದು ವೈದ್ಯಕೀಯ ವರದಿ ಕೈ ಸೇರಿದ ಬಳಿಕವಷ್ಟೇ ನಿರ್ಧಾರವಾಗಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.