173 ರನ್ಗಳ ಸ್ಪರ್ಧಾತ್ಮಕ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ (45) ಉತ್ತಮ ಆರಂಭ ಒದಗಿಸಿದರು. ಇನ್ನು ಜವಾಬ್ದಾರಿಯುತ ಇನಿಂಗ್ಸ್ ಆಡಿದ ರಿಯಾನ್ ಪರಾಗ್ 36 ರನ್ಗಳ ಕೊಡುಗೆ ನೀಡಿದರು. ಅಂತಿಮ ಹಂತದಲ್ಲಿ ಶಿಮ್ರಾನ್ ಹೆಟ್ಮೆಯರ್ 26 ರನ್ ಬಾರಿಸಿದರೆ, ರೋವ್ಮನ್ ಪೊವೆಲ್ ಬಿರುಸಿನ 16 ರನ್ ಸಿಡಿಸಿದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ ಕಳೆದುಕೊಂಡು 19 ಓವರ್ಗಳಲ್ಲಿ ಗೆಲುವಿನ ದಡ ಸೇರಿದರು.