
IPL 2024: ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ರನ್ ಸುರಿಮಳೆಯಾಗುವ ಸಾಧ್ಯತೆಯಿದೆ.

ಏಕೆಂದರೆ ಫೈನಲ್ ಪಂದ್ಯಕ್ಕಾಗಿ ಬ್ಯಾಟಿಂಗ್ಗೆ ಸಹಕಾರಿಯಾಗುವಂತಹ ಪಿಚ್ ಅನ್ನು ಸಿದ್ಧಪಡಿಸುತ್ತಿರುವುದಾಗಿ ಎಂಎ ಚಿದಂಬರಂ ಮೈದಾನದ ಕ್ಯುರೇಟರ್ ತಿಳಿಸಿರುವುದಾಗಿ ಐಪಿಎಲ್ ವೀಕ್ಷಕ ವಿವರಣೆಗಾರ ಕೆವಿನ್ ಪೀಟರ್ಸನ್ ಹೇಳಿದ್ದಾರೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಬೃಹತ್ ಮೊತ್ತವನ್ನು ನಿರೀಕ್ಷಿಸಬಹುದು.

ಫೈನಲ್ ಪಂದ್ಯಕ್ಕಾಗಿ ನಾವು ಮುಂಬೈ ಮೈದಾನದ ಮಾದರಿಯಲ್ಲಿ ಕೆಂಪು ಮಣ್ಣಿನ ಪಿಚ್ ಅನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಕ್ಯುರೇಟರ್ ಹೇಳಿದ್ದಾರೆ. ಇದರಿಂದ ಈ ಪಂದ್ಯದಲ್ಲಿ ವೇಗಿಗಳಿಂದ ಮತ್ತು ಬ್ಯಾಟರ್ಗಳಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು ಎಂದು ಪೀಟರ್ಸನ್ ಹೇಳಿದ್ದಾರೆ.

ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬೌಲರ್ಗಳು ಮೇಲುಗೈ ಸಾಧಿಸಿದ್ದರು. ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ಬೌಲರ್ಗಳು ಕೇವಲ 175 ರನ್ಗಳಿಗೆ ಕಟ್ಟಿ ಹಾಕಿದ್ದರು. ಇದಾದ ಬಳಿಕ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಎಸ್ಆರ್ಹೆಚ್ ಬೌಲರ್ಗಳು ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 139 ರನ್ಗಳಿಗೆ ನಿಯಂತ್ರಿಸಿ 36 ರನ್ಗಳ ಜಯ ಸಾಧಿಸಿದ್ದರು.

ಇದೀಗ ಫೈನಲ್ ಪಂದ್ಯಕ್ಕಾಗಿ ಕೆಂಪು ಮಣ್ಣಿನ ಪಿಚ್ ಅನ್ನು ನಿರ್ಮಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಎರಡೂ ತಂಡಗಳಲ್ಲೂ ಉತ್ತಮ ಬೌಲರ್ಗಳು ಮತ್ತು ಬಲಿಷ್ಠ ದಾಂಡಿಗರ ದಂಡೇ ಇದ್ದು, ಹೀಗಾಗಿ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕುಲ್ ರಾಯ್, ಮನೀಶ್ ಪಾಂಡೆ, ನಿತೀಶ್ ರಾಣಾ, ಶ್ರೀಕರ್ ಭರತ್, ಶೆರ್ಫಾನೆ ರುದರ್‌ಫೋರ್ಡ್, ದುಷ್ಮಂತ ಚಮೀರಾ, ಚೇತನ್ ಸಕರಿಯಾ, ಅಂಗ್‌ಕ್ರಿಶ್ ರಘುವಂಶಿ, ಸಾಕಿಬ್ ಹುಸೇನ್, ಸುಯಾಶ್ ಶರ್ಮಾ, ಅಲ್ಲಾ ಘಜನ್‌ಫರ್.

ಸನ್‌ರೈಸರ್ಸ್ ಹೈದರಾಬಾದ್ ತಂಡ: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್, ಜಯದೇವ್ ಉನಾದ್ಕಟ್, ಶಹಬಾಝ್ ಅಹ್ಮದ್, ಉಮ್ರಾನ್ ಮಲಿಕ್, ಸನ್ವಿರ್ ಸಿಂಗ್, ಗ್ಲೆನ್ ಫಿಲಿಪ್ಸ್, ಮಯಾಂಕ್ ಮಾರ್ಕಂಡೆ, ಮಯಾಂಕ್ ಅಗರ್ವಾಲ್, ವಾಷಿಂಗ್ಟನ್ ಸುಂದರ್, ಅನ್ಮೋಲ್ಪ್ರೀತ್ ಸಿಂಗ್, ಉಪೇಂದ್ರ ಯಾದವ್, ಜಾತವೇಧ್ ಸುಬ್ರಹ್ಮಣ್ಯನ್, ವಿಜಯಕಾಂತ್ ವ್ಯಾಸ್ಕಂತ್, ಫಝಲ್ಹಕ್ ಫಾರೂಕಿ, ಮಾರ್ಕೊ ಯಾನ್ಸೆನ್, ಆಕಾಶ್ ಮಹಾರಾಜ್ ಸಿಂಗ್.
Published On - 11:07 am, Sun, 26 May 24