IPL 2024 DC vs LSG: ಇಂದಿನ ಪಂದ್ಯದಲ್ಲಿ ಯಾರು ಗೆದ್ದರೆ RCB ತಂಡಕ್ಕೆ ಪ್ಲಸ್ ಪಾಯಿಂಟ್
IPL 2024: ಐಪಿಎಲ್ನ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಆರ್ಸಿಬಿ ತಂಡವನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಲಿದೆ. ಇದಾಗ್ಯೂ ನೆಟ್ ರನ್ ರೇಟ್ನಲ್ಲಿ ಆರ್ಸಿಬಿ ತಂಡ ಮುಂದಿರಲಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹಿಂದಿಕ್ಕುವ ಅವಕಾಶ ಆರ್ಸಿಬಿ ತಂಡಕ್ಕಿರಲಿದೆ.
Updated on: May 14, 2024 | 8:52 AM

ಐಪಿಎಲ್ನ (IPL 2024) 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್ ರೇಸ್ನಲ್ಲಿದೆ. ಹೀಗಾಗಿ ಉಭಯ ತಂಡಗಳ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

ಮತ್ತೊಂದೆಡೆ ಈ ಪಂದ್ಯದ ಫಲಿತಾಂಶ ಆರ್ಸಿಬಿ ತಂಡದ ಪ್ಲೇಆಫ್ ಹಾದಿಯನ್ನು ಕೂಡ ನಿರ್ಧರಿಸಲಿದೆ. ಅಂದರೆ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

ಅದರಂತೆ ಆರ್ಸಿಬಿ ಪಾಲಿಗೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲುವುದು ಉತ್ತಮ. ಏಕೆಂದರೆ 12 ಅಂಕಗಳನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.482 ನೆಟ್ ರನ್ ರೇಟ್ ಹೊಂದಿದೆ. ಇನ್ನು ಆರ್ಸಿಬಿ (+0.387) ತಂಡವನ್ನು ನೆಟ್ ರನ್ ರೇಟ್ನಲ್ಲಿ ಹಿಂದಿಕ್ಕಲು ಡೆಲ್ಲಿ ಕ್ಯಾಪಿಟಲ್ಸ್ ಏನಿಲ್ಲಾ ಅಂದರೂ ಕನಿಷ್ಠ 100 ಕ್ಕಿಂತ ಹೆಚ್ಚಿನ ರನ್ಗಳ ಅಂತರದಿಂದ ಗೆಲ್ಲಬೇಕು. ಅಂತಹ ಅಮೋಘ ಗೆಲುವು ಸಾಧಿಸಿದರೆ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆರ್ಸಿಬಿಯನ್ನು ನೆಟ್ ರನ್ ರೇಟ್ನಲ್ಲಿ ಹಿಂದಿಕ್ಕಲು ಸಾಧ್ಯ.

ಇದೇ ವೇಳೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋತರೆ 16 ಅಂಕಗಳನ್ನು ಕಲೆಗಹಾಕುವ ಅವಕಾಶ ಕಳೆದುಕೊಳ್ಳಲಿದೆ. ಅಂದರೆ ಎಲ್ಎಸ್ಜಿ ತಂಡಕ್ಕೆ ಇನ್ನು 2 ಪಂದ್ಯಗಳಿದ್ದು, ಈ ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಇದರಿಂದ ಆರ್ಸಿಬಿ ಪ್ಲೇಆಫ್ ರೇಸ್ನಿಂದ ಹೊರಬೀಳಬಹುದು. ಅದೇ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸೋತರೆ ಆರ್ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೆಚ್ಚಾಗಲಿದೆ.

ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಡಿಮೆ ರನ್ಗಳ ಅಂತರದಿಂದ ಅಥವಾ ಸಾಮಾನ್ಯ ಗೆಲುವು ಸಾಧಿಸಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಲಿದೆ. ಇದಾಗ್ಯೂ ಸಿಎಸ್ಕೆ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಆರ್ಸಿಬಿಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲು ಉತ್ತಮ ಅವಕಾಶ ಇರಲಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಆರ್ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವುದು ಉತ್ತಮ.
