Rohit Sharma: ರೋಹಿತ್ ಶರ್ಮಾಗೆ ಬಿಗ್ ಆಫರ್ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್
TV9 Web | Updated By: ಝಾಹಿರ್ ಯೂಸುಫ್
Updated on:
Dec 17, 2023 | 7:59 AM
IPL 2024: ಡೆಲ್ಲಿ ಕ್ಯಾಪಿಟಲ್ಸ್ ಮುಂದಿಟ್ಟ ಬಿಗ್ ಆಫರ್ ಅನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿ ರೋಹಿತ್ ಶರ್ಮಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ಹಿಟ್ಮ್ಯಾನ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕೇವಲ ಬ್ಯಾಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
1 / 7
IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಸ್ಥಾನದಿಂದ ರೋಹಿತ್ ಶರ್ಮಾ (Rohit Sharma) ಅವರನ್ನು ಕೆಳಗಿಳಿಸಲಾಗಿದೆ. ಅಲ್ಲದೆ ತಂಡದ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲಾಗಿದೆ. ಇದರ ನಡುವೆ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್ ಪ್ಲ್ಯಾನ್ ರೂಪಿಸಿತ್ತು ಎಂಬ ವಿಚಾರ ಇದೀಗ ಬಹಿರಂಗವಾಗಿದೆ.
2 / 7
ನಾಯಕನ ಸ್ಥಾನದಿಂದ ರೋಹಿತ್ ಶರ್ಮಾರನ್ನು ವಜಾಗೊಳಿಸಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಮುಂಬೈ ಇಂಡಿಯನ್ಸ್ ಅನ್ನು ಸಂಪರ್ಕಿಸಿದೆ. ಅಲ್ಲದೆ ಹಿಟ್ಮ್ಯಾನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಮುಂದಾಗಿತ್ತು.
3 / 7
ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಿಟ್ಟ ಡೀಲ್ ಅನ್ನು ಕುದುರಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಒಪ್ಪಿರಲಿಲ್ಲ. ಅಂದರೆ ರೋಹಿತ್ ಶರ್ಮಾ ಅವರನ್ನು ಟ್ರೇಡ್ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎಲ್ಲಾ ರೀತಿಯಲ್ಲೂ ಸಿದ್ಧರಿದ್ದರು. ಆದರೆ ಈ ಟ್ರೇಡಿಂಗ್ ಡೀಲ್ ಅನ್ನು ಮುಂಬೈ ಫ್ರಾಂಚೈಸಿ ತಿರಸ್ಕರಿಸಿದೆ ಎಂದು ವರದಿಯಾಗಿದೆ.
4 / 7
ಒಂದು ವೇಳೆ ಡಿಸೆಂಬರ್ 12 ರೊಳಗೆ ಮುಂಬೈ ಇಂಡಿಯನ್ಸ್ ಟ್ರೇಡಿಂಗ್ಗೆ ಒಪ್ಪಿಕೊಂಡಿದ್ದರೆ ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗುತ್ತಿದ್ದರು. ಅಷ್ಟೇ ಅಲ್ಲದೆ ಡೆಲ್ಲಿ ತಂಡದ ನಾಯಕತ್ವವನ್ನೂ ವಹಿಸಿಕೊಳ್ಳುತ್ತಿದ್ದರು.
5 / 7
ಏಕೆಂದರೆ ಈ ಬಾರಿಯ ಐಪಿಎಲ್ನಲ್ಲಿ ರಿಷಭ್ ಪಂತ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇತ್ತ ರೋಹಿತ್ ಶರ್ಮಾ ಅವರನ್ನು ಖರೀದಿಸಿ ಅವರಿಗೆ ತಂಡದ ನಾಯಕತ್ವ ನೀಡಲು ಡೆಲ್ಲಿ ಕ್ಯಾಪಿಟಲ್ಸ್ ಪ್ಲ್ಯಾನ್ ರೂಪಿಸಿತ್ತು.
6 / 7
ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಿಟ್ಟ ಬಿಗ್ ಆಫರ್ ಅನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿ ರೋಹಿತ್ ಶರ್ಮಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ಹಿಟ್ಮ್ಯಾನ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕೇವಲ ಬ್ಯಾಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
7 / 7
ಮುಂಬೈ ಇಂಡಿಯನ್ಸ್ ಉಳಿಸಿಕೊಂಡಿರುವ ಆಟಗಾರರು: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಕ್ಯಾಮರೂನ್ ಗ್ರೀನ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್‌ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್, ರೊಮಾರಿಯೋ ಶೆಫರ್ಡ್.