IPL 2024: ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ RCB ಆಟಗಾರ

Updated on: May 23, 2024 | 7:17 AM

Dinesh Karthik: ಈ ಬಾರಿಯ ಐಪಿಎಲ್​ಗೂ ಮುನ್ನ ದಿನೇಶ್ ಕಾರ್ತಿಕ್ ನಿವೃತ್ತರಾಗಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಇದೀಗ ಅಹಮದಾಬಾದ್​ನಲ್ಲಿ ನಡೆದ ಕೊನೆಯ ಪಂದ್ಯದ ವೇಳೆ ಅಭಿಮಾನಿಗಳತ್ತ ಕೈ ಬೀಸುವ ಮೂಲಕ ಡಿಕೆ ಐಪಿಎಲ್ ವೃತ್ತಿ ಜೀವನವನ್ನು ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ 17 ವರ್ಷಗಳ ಐಪಿಎಲ್​ ಕೆರಿಯರ್​ಗೆ ವಿದಾಯ ಹೇಳಿದ್ದಾರೆ.

1 / 7
IPL 2024: ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (Dinesh Karthik) ಐಪಿಎಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

IPL 2024: ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (Dinesh Karthik) ಐಪಿಎಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

2 / 7

ದಿನೇಶ್ ಕಾರ್ತಿಕ್ ಈ ಬಾರಿಯ ಐಪಿಎಲ್​ನಲ್ಲಿ RCBಗೆ ಟ್ರೋಫಿ ಗೆದ್ದು ವಿದಾಯ ಹೇಳುವ ನಿರೀಕ್ಷೆಯಲ್ಲಿದ್ದರು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಆರ್​ ತಂಡ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಆರ್​ಸಿಬಿ ತಂಡ ಐಪಿಎಲ್​ನಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಕೂಡ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

3 / 7

17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅದರಲ್ಲೂ ಆರ್​ಸಿಬಿ ಪರ ಟ್ರೋಫಿ ಗೆಲ್ಲುವ ಆಸೆ ಹೊಂದಿದ್ದ ಡಿಕೆ ಅವರ ಕನಸು ಕನಸಾಗಿಯೇ ಉಳಿದಿದೆ.

4 / 7

2008 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ದಿನೇಶ್ ಕಾರ್ತಿಕ್, 2011 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ ಆಡಿದ್ದರು.

5 / 7

2012 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪಾಲಾದ ಡಿಕೆ 2014 ರಲ್ಲಿ ಮತ್ತೆ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಮರಳಿದ್ದರು. 2015 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು.

6 / 7

2016-17 ರಲ್ಲಿ ಗುಜರಾತ್ ಲಯನ್ಸ್ (ಈ ತಂಡ ಈಗಿಲ್ಲ) ಪರ ಆಡಿದ್ದ ದಿನೇಶ್ ಕಾರ್ತಿಕ್, 2018 ರಿಂದ 2021 ರವರೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು.

7 / 7

ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಈ ಎಲ್ಲಾ ದಾಖಲೆಗಳೊಂದಿಗೆ ಇದೀಗ ಡಿಕೆ ಐಪಿಎಲ್​ಗೆ ವಿದಾಯ ಹೇಳಿದ್ದಾರೆ.

Published On - 7:08 am, Thu, 23 May 24

Loading...
Unable to load recommendations.
Follow Us