IPL 2024: ಡೆಲ್ಲಿ ಕ್ಯಾಪಿಟಲ್ಸ್​ಗೆ ಕೈಕೊಟ್ಟ ಸ್ಪೋಟಕ ದಾಂಡಿಗ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 23 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಅಭಿಯಾನ ಆರಂಭಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 14, 2024 | 8:53 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಕ್ಕೆ ಆಘಾತ ಎದುರಾಗಿದೆ. ಡೆಲ್ಲಿ ತಂಡದಲ್ಲಿದ್ದ ಸ್ಟಾರ್ ಆಟಗಾರ ಹ್ಯಾರಿ ಬ್ರೂಕ್ (Harry Brook) ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಈ ಬಾರಿ ಐಪಿಎಲ್​ನಲ್ಲಿ ಭಾಗವಹಿಸುತ್ತಿಲ್ಲ ಎಂದು ಬ್ರೂಕ್ ತಿಳಿಸಿದ್ದಾರೆ.

1 / 6
ಈ ಬಾರಿಯ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹ್ಯಾರಿ ಬ್ರೂಕ್ ಅವರನ್ನು 4 ಕೋಟಿ ರೂ. ನೀಡಿ ಖರೀದಿಸಿತ್ತು. ಇದೀಗ ಐಪಿಎಲ್​ ಆರಂಭಕ್ಕೆ ವಾರ ಮಾತ್ರ ಉಳಿದಿರುವಾಗ ಇಂಗ್ಲೆಂಡ್ ಆಟಗಾರ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

2 / 6
ಹೀಗಾಗಿ ಇನ್ನೊಂದು ವಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸಮರ್ಥ ಬದಲಿ ಆಟಗಾರನನ್ನು ಹುಡುಕಬೇಕಿದೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಯುವ ದಾಂಡಿಗ ಜೇಕ್ ಫ್ರೇಸರ್ ಹೆಸರು ಕೇಳಿ ಬರುತ್ತಿದೆ. ಅದರಂತೆ ಬ್ರೂಕ್ ಬದಲಿಗೆ ಜೇಕ್ ಡೆಲ್ಲಿ ತಂಡಕ್ಕೆ ಎಂಟ್ರಿ ಕೊಡುವ ಸಾಧ್ಯತೆಯಿದೆ.

3 / 6
21 ವರ್ಷದ ಜೇಕ್ ಫ್ರೇಸರ್ ಆಸ್ಟ್ರೇಲಿಯಾದಲ್ಲಿ ನಡೆದ ಮಾರ್ಷ್​ ಕಪ್​ನಲ್ಲಿ ಟಾಸ್ಮೇನಿಯಾ ವಿರುದ್ಧ ಕೇವಲ 29 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವ ದಾಖಲೆ ಬರೆದಿದ್ದರು. ಈ ವಿಶ್ವ ದಾಖಲೆ ವೀರನನ್ನು ತಂಡಕ್ಕೆ ಕರೆತರಲು ಕೋಚ್ ರಿಕಿ ಪಾಂಟಿಂಗ್ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ತುದಿಗಾಲಲ್ಲಿ ನಿಂತಿದೆ ಎಂದು ವರದಿಯಾಗಿದೆ.

4 / 6
ಇನ್ನು ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ. ಕಳೆದ 14 ತಿಂಗಳುಗಳಿಂದ ಮೈದಾನದಿಂದ ಹೊರಗುಳಿದಿದ್ದ ಪಂತ್ ಐಪಿಎಲ್ ಮೂಲಕ ಕಂಬ್ಯಾಕ್ ಮಾಡಲಿದ್ದು, ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್ (ನಾಯಕ), ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಕ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಯಶ್ ಧುಲ್, ಟ್ರಿಸ್ಟಾನ್ ಸ್ಟಬ್ಸ್, ರಿಕಿ ಭುಯಿ, ಕುಮಾರ್ ಕುಶಾಗ್ರಾ, ರಸಿಖ್ ದಾರ್, ಜ್ಯೆ ರಿಚರ್ಡ್‌ಸನ್, ಸುಮಿತ್ ಕುಮಾರ್, ಶಾಯ್ ಹೋಪ್, ಸ್ವಸ್ತಿಕ್ ಚಿಕಾರಾ.

6 / 6
Follow us