AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCBಗೆ ಪ್ರತಿ ಪಂದ್ಯಗಳು ಸೆಮಿಫೈನಲ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 7 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 6 ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ ತಂಡ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿದೆ.

TV9 Web
| Edited By: |

Updated on: Apr 18, 2024 | 8:24 AM

Share
7 ಪಂದ್ಯಗಳು... 6 ಸೋಲು... 1 ಗೆಲುವು, ಈ ಬಾರಿಯ ಐಪಿಎಲ್​ನ (IPL 2024) ಮೊದಲಾರ್ಧದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈ ಕೊನೆಯ ಸ್ಥಾನದಿಂದ ಅಗ್ರ-4 ರಲ್ಲಿ ಸ್ಥಾನ ಪಡೆಯಬೇಕಿದ್ದರೆ ಆರ್​ಸಿಬಿ ಮುಂದಿನ 7 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯಗಳು ಸೆಮಿಫೈನಲ್ ಎಂದು ಅಭಿಪ್ರಾಯಪಟ್ಟಿದ್ದಾರೆ ಕೋಚ್ ಆ್ಯಂಡಿ ಫ್ಲವರ್.

1 / 5
ಈ ಬಗ್ಗೆ ಮಾತನಾಡಿರುವ ಆ್ಯಂಡಿ ಫ್ಲವರ್, ಆರ್​ಸಿಬಿ ತಂಡವು ಮುಂದಿನ 7 ಪಂದ್ಯಗಳನ್ನು ಸೆಮಿಫೈನಲ್ ಎಂದು ಭಾವಿಸಿ ಆಡಬೇಕಿದೆ. ಅಂದರೆ ಇದು ನಾಕೌಟ್ ಹಂತ ಎಂದು ಭಾವಿಸಿಯೇ ಆರ್​ಸಿಬಿ ಕಣಕ್ಕಿಳಿಯಬೇಕು. ಈ ಮೂಲಕ ಕಂಬ್ಯಾಕ್ ಮಾಡಲು ಪ್ರಯತ್ನಿಸಬೇಕಿದೆ ಎಂದು ಫ್ಲವರ್ ಹೇಳಿದ್ದಾರೆ.

2 / 5
ಆರ್​ಸಿಬಿ ತಂಡವು ಮುಂದಿನ ಏಳು ಮ್ಯಾಚ್​ಗಳನ್ನು ಗೆದ್ದುಕೊಂಡರೆ ಒಟ್ಟು 14 ಅಂಕಗಳನ್ನು ಪಡೆದುಕೊಳ್ಳಲಿದೆ. ಈಗಾಗಲೇ 2 ಪಾಯಿಂಟ್ಸ್ ಹೊಂದಿರುವ ಆರ್​ಸಿಬಿ 16 ಅಂಕಗಳನ್ನು ಗಳಿಸಿದರೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ. ಒಂದು ವೇಳೆ ಮುಂದಿನ 7 ಪಂದ್ಯಗಳಲ್ಲಿ ಒಂದು ಮ್ಯಾಚ್ ಸೋತರೂ ಪ್ಲೇಆಫ್ ಪ್ರವೇಶಿಸಲು ನೆಟ್ ರನ್ ರೇಟ್ ಅಥವಾ ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗಿ ಬರಬಹುದು.

3 / 5
ಹೀಗಾಗಿಯೇ ಆ್ಯಂಡಿ ಫ್ಲವರ್​, ಆರ್​ಸಿಬಿ ಪಾಲಿಗೆ ಮುಂಬರುವ ಪಂದ್ಯಗಳು ನಾಕೌಟ್ ಮ್ಯಾಚ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಅದರಂತೆ ಈ ಏಳು ಪಂದ್ಯಗಳಲ್ಲಿ ಆರ್​ಸಿಬಿ ವಿಶೇಷ ರಣತಂತ್ರಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಂದರೆ ಗೆಲುವಿನೊಂದಿಗೆ ಆರ್​ಸಿಬಿ ನೆಟ್​ ರನ್​ ರೇಟ್​ ಹೆಚ್ಚಿಸಿಕೊಳ್ಳಲು ಹೆಚ್ಚಿನ ಮಹತ್ವ ನೀಡಲಿದೆ. ಈ ಮೂಲಕ ದ್ವಿತೀಯಾರ್ಧದಲ್ಲಿ ಕಂಬ್ಯಾಕ್ ಮಾಡಲು ಆರ್​ಸಿಬಿ ಆಟಗಾರರು ಸಕಲ ರೀತಿಯಲ್ಲೂ ಸನ್ನದ್ಧವಾಗುತ್ತಿದ್ದಾರೆ.

4 / 5
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 21 ರಂದು ಆಡಲಿದ್ದು, ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ದ್ವಿತೀಯಾರ್ಧದಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ ಆರ್​ಸಿಬಿ.

5 / 5
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!

ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!

ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!