AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರನ್ ಮೆಷಿನ್… ಪಂಜಾಬ್ ಕಿಂಗ್ಸ್​ ಚಿಂತೆ ಹೆಚ್ಚಿಸಿದ ಹರ್ಷಲ್ ಪಟೇಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 11ನೇ ಪಂದ್ಯದಲ್ಲೂ ಪಂಜಾಬ್ ಕಿಂಗ್ಸ್ ವೇಗಿ ಹರ್ಷಲ್ ಪಟೇಲ್ ದುಬಾರಿಯಾಗಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ 4 ಓವರ್​ಗಳನ್ನು ಬೌಲಿಂಗ್ ಮಾಡಿರುವ ಹರ್ಷಲ್ ಪಟೇಲ್ ಬರೋಬ್ಬರಿ 45 ರನ್ ನೀಡಿದ್ದಾರೆ. ಇದಕ್ಕೂ ಮುನ್ನ ನಡೆದ ಎರಡೂ ಪಂದ್ಯಗಳಲ್ಲೂ ಹರ್ಷಲ್ ಪಟೇಲ್ 10ರ ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟಿದ್ದರು.

TV9 Web
| Edited By: |

Updated on: Mar 31, 2024 | 7:11 AM

Share
ಈ ಬಾರಿಯ ಐಪಿಎಲ್ (IPL 2024)​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಹರ್ಷಲ್ ಪಟೇಲ್ (Harshal Patel) ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬರೋಬ್ಬರಿ 11.75 ಕೋಟಿ ರೂ. ನೀಡಿ ಖರೀದಿಸಿತ್ತು. ಈ ದುಬಾರಿ ಖರೀದಿಯೂ ಇದೀಗ ಪಂಜಾಬ್ ಕಿಂಗ್ಸ್ ಪಾಲಿಗೆ ದುಬಾರಿಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಸಾಕ್ಷಿಯೇ ಕಳೆದ ಮೂರು ಪಂದ್ಯಗಳಲ್ಲಿನ ಹರ್ಷಲ್ ಅವರ ಪ್ರದರ್ಶನ.

1 / 6
ಟೀಮ್ ಇಂಡಿಯಾ ವೇಗಿಯ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಪಂಜಾಬ್ ಕಿಂಗ್ಸ್ ಪಾಲಿಗೆ ಹರ್ಷಲ್ ಪಂದ್ಯದಿಂದ ಪಂದ್ಯಕ್ಕೆ ದುಬಾರಿಯಾಗುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 4 ಓವರ್​ ಎಸೆದಿದ್ದ ಹರ್ಷಲ್ ನೀಡಿದ್ದು ಬರೋಬ್ಬರಿ 47 ರನ್​ಗಳು.

2 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಹರ್ಷಲ್ ಪಟೇಲ್ 4 ಓವರ್​ಗಳಲ್ಲಿ 45 ರನ್​ಗಳು ಬಿಟ್ಟುಕೊಟ್ಟಿದ್ದರು. ಇದುವೇ ಆರ್​ಸಿಬಿ ವಿರುದ್ಧ ಪಂಜಾಬ್ ತಂಡದ ಸೋಲಿಗೆ ಕಾರಣವಾಗಿತ್ತು.

3 / 6
ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ 45 ರನ್ ನೀಡಿದ್ದಾರೆ. ಡೆತ್ ಓವರ್​ಗಳ ವೇಳೆ ಹೆಚ್ಚಿನ ರನ್ ನೀಡುವ ಮೂಲಕ ಮತ್ತೊಮ್ಮೆ ಹರ್ಷಲ್ ಪಟೇಲ್ ಪಂಜಾಬ್ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದಾರೆ.

4 / 6
ಈ ಮೂಲಕ ಕೇವಲ ಮೂರು ಪಂದ್ಯಗಳಲ್ಲೇ ಹರ್ಷಲ್ ಪಟೇಲ್ 137 ರನ್​ ಬಿಟ್ಟುಕೊಟ್ಟಿದ್ದಾರೆ. ಅಂದರೆ ಪಂಜಾಬ್ ಕಿಂಗ್ಸ್ ತಂಡದ ಇತರೆ ಬೌಲರ್​ಗಳು ಉತ್ತಮ ಪ್ರದರ್ಶನ ನೀಡಿದರೂ ಹರ್ಷಲ್ ಪಟೇಲ್ ಮಾತ್ರ ಪ್ರತಿ ಪಂದ್ಯದಲ್ಲೂ 10 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ರನ್ ನೀಡುತ್ತಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್​ ತಂಡದ ಸೋಲಿಗೆ ಕಾರಣವಾಗುತ್ತಿದ್ದಾರೆ.

5 / 6
ಅಂದಹಾಗೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿದ್ದ ಹರ್ಷಲ್ ಪಟೇಲ್ 13 ಪಂದ್ಯಗಳಲ್ಲಿ ಪ್ರತಿ ಓವರ್​ಗೆ 9.66 ರ ಸರಾಸರಿಯಲ್ಲಿ ರನ್ ನೀಡಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ಅವರನ್ನು ಬಿಡುಗಡೆ ಮಾಡಿತ್ತು. ಆದರೆ ಆರ್​ಸಿಬಿ ಕೈಬಿಟ್ಟ ಬೆನ್ನಲ್ಲೇ 11.75 ಕೋಟಿ ರೂ. ನೀಡಿ ಖರೀದಿಸಿರುವ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಇದೀಗ ಸಂಕಷ್ಟಕ್ಕೆ ಸಿಲುಕಿದೆ.

6 / 6
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?

ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ