ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 68ನೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್ಸಿಬಿ ತಂಡಕ್ಕೆ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸಿದ್ದರು.
ಮೊದಲ ವಿಕೆಟ್ಗೆ 78 ರನ್ಗಳ ಜೊತೆಯಾಟವಾಡಿದ ಬಳಿಕ ವಿರಾಟ್ ಕೊಹ್ಲಿ (47) ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಡುಪ್ಲೆಸಿಸ್ 39 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 54 ರನ್ ಬಾರಿಸಿದರು. ಈ ಹಂತದಲ್ಲಿ ಥರ್ಡ್ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿನಿಂದಾಗಿ ರನೌಟ್ಗೆ ಬಲಿಯಾಗಬೇಕಾಯಿತು.
ಇದಾಗ್ಯೂ ಈ ಪಂದ್ಯದಲ್ಲಿ ಆರ್ಸಿಬಿ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 218 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್ಸಿಬಿ ತಂಡ 27 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಇನ್ನು ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ಫಾಫ್ ಡುಪ್ಲೆಸಿಸ್ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು. ಆದರೆ ಆರ್ಸಿಬಿ ತಂಡದ ನಾಯಕ ಈ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಸಹ ಆಟಗಾರನಿಗೆ ಅರ್ಪಿಸಿದ್ದರು.
faf du plessis talking in post match presentation after RR vs RCB Eliminator Match
ಕೊನೆಯ ಓವರ್ನಲ್ಲಿ ಪ್ಲೇಆಫ್ಗೆ ಪ್ರವೇಶಿಸಲು ಸಿಎಸ್ಕೆ ತಂಡಕ್ಕೆ ಕೇವಲ 17 ರನ್ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಧೋನಿ ಸಿಕ್ಸರ್ ಬಾರಿಸಿದರು. ಆದರೆ 2ನೇ ಎಸೆತದಲ್ಲಿ ಧೋನಿಯನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರು.
ಇನ್ನು ಕೊನೆಯ 4 ಎಸೆತಗಳಲ್ಲಿ ದಯಾಳ್ ನೀಡಿದ್ದು ಕೇವಲ 1 ರನ್ ಮಾತ್ರ. ಈ ಮೂಲಕ ಆರ್ಸಿಬಿ ತಂಡಕ್ಕೆ ಜಯ ತಂದುಕೊಡುವಲ್ಲಿ ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಫಾಫ್ ಡುಪ್ಲೆಸಿಸ್ ಆರ್ಸಿಬಿ ವೇಗಿಗೆ ಅರ್ಪಿಸಿದ್ದಾರೆ.
Published On - 8:52 am, Sun, 19 May 24