IPL 2024: ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಆಟಗಾರನಿಗೆ ಅರ್ಪಿಸಿದ ಫಾಫ್ ಡುಪ್ಲೆಸಿಸ್

|

Updated on: May 19, 2024 | 2:22 PM

IPL 2024 RCB vs CSK: ಐಪಿಎಲ್​ನ 68ನೇ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಫಾಫ್ ಪಡೆ 27 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಕೊನೆಯ ಪಂದ್ಯದ ಮೂಲಕ ಪ್ಲೇಆಫ್ ಹಂತಕ್ಕೇರುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ.

1 / 7
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 68ನೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿ ತಂಡಕ್ಕೆ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸಿದ್ದರು.

2 / 7
ಮೊದಲ ವಿಕೆಟ್​ಗೆ 78 ರನ್​ಗಳ ಜೊತೆಯಾಟವಾಡಿದ ಬಳಿಕ ವಿರಾಟ್ ಕೊಹ್ಲಿ (47) ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಡುಪ್ಲೆಸಿಸ್ 39 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 54 ರನ್ ಬಾರಿಸಿದರು. ಈ ಹಂತದಲ್ಲಿ ಥರ್ಡ್ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿನಿಂದಾಗಿ ರನೌಟ್​ಗೆ ಬಲಿಯಾಗಬೇಕಾಯಿತು.

3 / 7
ಇದಾಗ್ಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 218 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

4 / 7
ಇನ್ನು ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ಫಾಫ್ ಡುಪ್ಲೆಸಿಸ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು. ಆದರೆ ಆರ್​ಸಿಬಿ ತಂಡದ ನಾಯಕ ಈ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಸಹ ಆಟಗಾರನಿಗೆ ಅರ್ಪಿಸಿದ್ದರು.

5 / 7
faf du plessis

faf du plessis

6 / 7
ಕೊನೆಯ ಓವರ್​ನಲ್ಲಿ ಪ್ಲೇಆಫ್​ಗೆ ಪ್ರವೇಶಿಸಲು ಸಿಎಸ್​ಕೆ ತಂಡಕ್ಕೆ ಕೇವಲ 17 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಧೋನಿ ಸಿಕ್ಸರ್ ಬಾರಿಸಿದರು. ಆದರೆ 2ನೇ ಎಸೆತದಲ್ಲಿ ಧೋನಿಯನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರು.

7 / 7
ಇನ್ನು ಕೊನೆಯ 4 ಎಸೆತಗಳಲ್ಲಿ ದಯಾಳ್ ನೀಡಿದ್ದು ಕೇವಲ 1 ರನ್ ಮಾತ್ರ. ಈ ಮೂಲಕ ಆರ್​ಸಿಬಿ ತಂಡಕ್ಕೆ ಜಯ ತಂದುಕೊಡುವಲ್ಲಿ ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಫಾಫ್ ಡುಪ್ಲೆಸಿಸ್ ಆರ್​ಸಿಬಿ ವೇಗಿಗೆ ಅರ್ಪಿಸಿದ್ದಾರೆ.

Published On - 8:52 am, Sun, 19 May 24