AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ವಿವಾದಕ್ಕೆ ಕಾರಣವಾದ ಅಂಪೈರ್ ತೀರ್ಪು: ಔಟಾ ಅಥವಾ ನಾಟೌಟಾ?

IPL 2024 RCB vs CSK: ಐಪಿಎಲ್​ನ 68ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 218 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡ 20 ಓವರ್​ಗಳಲ್ಲಿ 191 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ 27 ರನ್​ಗಳ ಅಂತರದಿಂದ ಗೆದ್ದು ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:24 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ಟಿವಿ ಅಂಪೈರ್ ನೀಡಿದ ತೀರ್ಪು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 78 ರನ್​ ಕಲೆಹಾಕಿದ ಬಳಿಕ ವಿರಾಟ್ ಕೊಹ್ಲಿ (47) ಔಟಾದರು. ಇದರ ಬೆನ್ನಲ್ಲೇ ಅರ್ಧಶತಕ ಬಾರಿಸಿ ಡುಪ್ಲೆಸಿಸ್ ಅಪಾಯಕಾರಿಯಾಗುವ ಸೂಚನೆ ನೀಡಿದ್ದರು.

2 / 6
ಆದರೆ ಮಿಚೆಲ್ ಸ್ಯಾಂಟ್ನರ್ ಎಸೆದ 13ನೇ ಓವರ್​ನ ಕೊನೆಯ ಎಸೆತದಲ್ಲಿ ರಜತ್ ಪಾಟಿದಾರ್ ಸ್ಟ್ರೈಟ್ ಡ್ರೈವ್ ಶಾಟ್ ಬಾರಿಸಿದ್ದರು. ಚೆಂಡು ಸ್ಯಾಂಟ್ನರ್ ಕೈಗೆ ತಾಗಿ ನಾನ್ ಸ್ಟ್ರೈಕರ್ ಸ್ಟಂಪ್​ಗೆ ಬಡಿಯಿತು. ಅತ್ತ ನಾನ್​ ಸ್ಟ್ರೈಕರ್ ಎಂಡ್​ನಲ್ಲಿದ್ದ ಫಾಫ್ ಡುಪ್ಲೆಸಿಸ್ ತಕ್ಷಣವೇ ಬ್ಯಾಟ್​ ಅನ್ನು ಕ್ರೀಸ್​ನಲ್ಲಿಟ್ಟಿದ್ದರು.

3 / 6
ಅತ್ತ ಮಿಚೆಲ್ ಸ್ಯಾಂಟ್ನರ್ ಮನವಿ ಸಲ್ಲಿಸುತ್ತಿದ್ದಂತೆ ಫೀಲ್ಡ್ ಅಂಪೈರ್ ಥರ್ಡ್ ಅಂಪೈರ್​ಗೆ ರಿಪ್ಲೇ ಪರಿಶೀಲಿಸುವಂತೆ ಮನವಿ ಮಾಡಿದರು. ಅದರಂತೆ ರಿಪ್ಲೇ ಪರಿಶೀಲಿಸಿದ ಟಿವಿ ಅಂಪೈರ್ ಫಾಫ್ ಡುಪ್ಲೆಸಿಸ್ ರನೌಟ್ ಎಂದು ತೀರ್ಪು ನೀಡಿದರು.

4 / 6
ಆದರೆ ಚೆಂಡು ವಿಕೆಟ್​ಗೆ ಬಡಿಯುವ ಮುನ್ನವೇ ಫಾಫ್ ಡುಪ್ಲೆಸಿಸ್​ ಬ್ಯಾಟ್​ ಅನ್ನು ಕ್ರೀಸ್​ನಲ್ಲಿಟ್ಟಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಇದಾಗ್ಯೂ ಥರ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡಿದರಿಂದ ಖುದ್ದು ಫಾಫ್ ಡುಪ್ಲೆಸಿಸ್ ಆಶ್ಚರ್ಯಚಕಿತರಾದರು. ಅತ್ತ ಅಭಿಮಾನಿಗಳು ಕೂಡ ಅಚ್ಚರಿಗೊಂಡರು.

5 / 6
ಈ ಅಂಪೈರ್ ತೀರ್ಪಿನ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾದವು. ಅದರಲ್ಲೂ ಸಿಎಸ್​ಕೆ ಫಿಕ್ಸರ್ ಎಂಬ ಹ್ಯಾಶ್​ ಟ್ಯಾಗ್​ ಟ್ರೆಂಡ್ ಆದವು. ಇದಾಗ್ಯೂ ಅಂತಿಮವಾಗಿ ಈ ಪಂದ್ಯದಲ್ಲಿ ಆರ್​ಸಿಬಿ 27 ರನ್​ಗಳ ಜಯ ಸಾಧಿಸಿ ಪ್ಲೇಆಫ್​ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

6 / 6

Published On - 7:13 am, Sun, 19 May 24

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ