AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಸೋಲಿಗೆ ಯಾರು ಕಾರಣ ಎಂದು ತಿಳಿಸಿದ ಫಾಫ್ ಡುಪ್ಲೆಸಿಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆಡಿರುವ 4 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 3 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ IPL 2024 ರ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ಗೆದ್ದಿರುವುದು ಪಂಜಾಬ್ ಕಿಂಗ್ಸ್ ವಿರುದ್ಧ ಮಾತ್ರ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೂಡ ಸೋತಿದೆ.

TV9 Web
| Edited By: |

Updated on:Apr 03, 2024 | 8:01 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಗ್ಗರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಕ್ವಿಂಟನ್ ಡಿಕಾಕ್ (81) ಅರ್ಧಶತಕ ಬಾರಿಸಿ ಮಿಂಚಿದರು.

1 / 7
ಇನ್ನು ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ ನಿಕೋಲಸ್ ಪೂರನ್ 21 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್​ನೊಂದಿಗೆ 40 ರನ್ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 181 ರನ್​ ಕಲೆಹಾಕಿತು.

2 / 7
ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಪರ ಅಗ್ರ ದಾಂಡಿಗರು ವಿಫಲರಾದರು. ಇನ್ನು ಇಂಪ್ಯಾಕ್ ಪ್ಲೇಯರ್ ಆಗಿ ಕಣಕ್ಕಿಳಿದ ಮಹಿಪಾಲ್ ಲೋಮ್ರರ್ 13 ಎಸೆತಗಳಲ್ಲಿ 33 ರನ್ ಬಾರಿಸಿದ್ದು ಆರ್​ಸಿಬಿ ಪರ ಸ್ಕೋರ್. ಅಂತಿಮವಾಗಿ 19.4 ಓವರ್​ಗಳಲ್ಲಿ 153 ರನ್​ಗಳಿಗೆ ಆಲೌಟ್ ಆಗುವ ಮೂಲಕ ಆರ್​ಸಿಬಿ 28 ರನ್​ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

3 / 7
ಈ ಸೋಲಿನ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್, ನಮ್ಮ ತಂಡದ ಕಳಪೆ ಫೀಲ್ಡಿಂಗ್ ಸೋಲಿಗೆ ಮುಖ್ಯ ಕಾರಣ ಎಂದರು. ಈ ಪಂದ್ಯದ ಆರಂಭದಲ್ಲಿ ಕ್ವಿಂಟನ್ ಡಿಕಾಕ್ ಅವರ ಕ್ಯಾಚ್ ಅನ್ನು ಕೈಚೆಲ್ಲಿದ್ದರು. 32 ರನ್​ಗಳಿದ್ದಾಗ ಅವರಿಗೆ ನೀಡಲಾದ ಜೀವದಾನವನ್ನು ಬಳಸಿಕೊಂಡ ಡಿಕಾಕ್ 81 ರನ್ ಬಾರಿಸಿ ಅಬ್ಬರಿಸಿದರು.

4 / 7
ಹಾಗೆಯೇ ಕೊನೆಯ ಹಂತದಲ್ಲಿ ನಿಕೋಲಸ್ ಪೂರನ್ ಅವರ ಕ್ಯಾಚ್ ಅನ್ನು ಸಹ ಕೈಬಿಟ್ಟಿದ್ದರು. ಕೇವಲ 2 ರನ್​ಗಳಿಸಿದ್ದಾಗ ನೀಡಿದ ಅವಕಾಶವನ್ನು ಬಳಸಿಕೊಂಡ ಪೂರನ್ 40 ರನ್​ ಸಿಡಿಸಿದ್ದರು. ಈ ಎರಡು ಕ್ಯಾಚ್ ಡ್ರಾಪ್​ಗಳು ಆರ್​ಸಿಬಿ ಪಾಲಿಗೆ ದುಬಾರಿಯಾಗಿ ಪರಿಣಮಿಸಿತು ಎಂದು ಫಾಫ್ ಡುಪ್ಲೆಸಿಸ್ ತಿಳಿಸಿದ್ದಾರೆ.

5 / 7
ಇನ್ನು ಪವರ್​ಪ್ಲೇನಲ್ಲಿ ಆರ್​ಸಿಬಿ ಬೌಲರ್​ಗಳ ಕಳಪೆ ದಾಳಿಯನ್ನು ಟೀಕಿಸಿರುವ ಫಾಫ್ ಡುಪ್ಲೆಸಿಸ್, ಹೊಸ ಚೆಂಡಿನೊಂದಿಗೆ ಆರ್​ಸಿಬಿ ಬೌಲರ್​ಗಳು ಮೊದಲ 4 ಓವರ್​ಗಳಲ್ಲಿ 42 ರನ್ ಬಿಟ್ಟುಕೊಟ್ಟಿದ್ದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರಂಭದಲ್ಲೇ ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಆರ್​ಸಿಬಿ ಬೌಲರ್​ಗಳು ಅವಕಾಶ ನೀಡಿದ್ದರು ಎಂದು ಫಾಫ್ ದೂರಿದ್ದಾರೆ.

6 / 7
ಆರ್​ಸಿಬಿ ಫೀಲ್ಡರ್​ಗಳು ಮಾಡಿದ ತಪ್ಪು ಮತ್ತು ಬೌಲರ್​ಗಳ ಕಳಪೆ ಪ್ರದರ್ಶನದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ದುಬಾರಿಯಾಗಿ ಪರಿಣಮಿಸಿದೆ. ಈ ಎಲ್ಲಾ ಕಾರಣಗಳಿಂದಾಗಿ ಆರ್​ಸಿಬಿ ತಂಡವು ತವರಿನಲ್ಲಿ ಮತ್ತೊಮ್ಮೆ ಸೋಲುವಂತಾಯಿತು ಎಂದು ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

7 / 7

Published On - 7:59 am, Wed, 3 April 24

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು

ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!

ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?

ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು