ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ 5 ಪಂದ್ಯಗಳಲ್ಲಿ 4 ರಲ್ಲಿ ಸೋತಿದೆ. ಈ ಹಿಂದೆ ಸಿಎಸ್ಕೆ, ಕೆಕೆಆರ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮಕಾಡೆ ಮಲಗಿದ್ದ ಆರ್ಸಿಬಿ ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ (Virat Kohli) RCB ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.