IPL 2024: SRH ಅಬ್ಬರದ ನಡುವೆಯೂ RCB ದಾಖಲೆ ಸೇಫ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2024) 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ತಂಡ 31 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 277 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 246 ರನ್​ ಕಲೆಹಾಕಿ ಸೋಲೊಪ್ಪಿಕೊಂಡಿತು.

TV9 Web
| Updated By: ಝಾಹಿರ್ ಯೂಸುಫ್

Updated on: Mar 28, 2024 | 7:53 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 8ನೇ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ 11 ವರ್ಷಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಿ ಹೊಸ ಇತಿಹಾಸ ನಿರ್ಮಿಸುವ ಮೂಲಕ ಎಂಬುದು ವಿಶೇಷ. ಅಂದರೆ ಐಪಿಎಲ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಇದೀಗ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದೆ.

1 / 7
ಇದಕ್ಕೂ ಮುನ್ನ ಈ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು. 2013 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಕ್ರಿಸ್ ಗೇಲ್​ (175) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 263 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

2 / 7
ಇದೀಗ 11 ವರ್ಷಗಳ ಹಳೆಯ ದಾಖಲೆಯನ್ನು ಧೂಳೀಪಟ ಮಾಡಿ ಸನ್​ರೈಸರ್ಸ್ ಹೈದರಾಬಾದ್ ಹೊಸ ಇತಿಹಾಸ ನಿರ್ಮಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್ ಬಾರಿಸಿ ನೂತನ ದಾಖಲೆ ಬರೆದಿಟ್ಟಿದ್ದಾರೆ.

3 / 7
ಈ ದಾಖಲೆಯ ನಡುವೆ ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ಒಂದು ದಾಖಲೆ ಸೇಫ್ ಆಗಿ ಉಳಿದಿರುವುದು ವಿಶೇಷ. ಅಂದರೆ ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ 200 ರನ್ ಕಲೆಹಾಕಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿಯೇ ಉಳಿದುಕೊಂಡಿದೆ.

4 / 7
2013 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 14.1 ಓವರ್​ಗಳಲ್ಲಿ 200 ರನ್ ಪೂರೈಸಿ ದಾಖಲೆ ನಿರ್ಮಿಸಿತ್ತು. ಇದೀಗ ಸನ್​ರೈಸರ್ಸ್ ಹೈದರಾಬಾದ್ 277 ರನ್​ ಬಾರಿಸಿದರೂ ಈ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

5 / 7
ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡವು 200 ರನ್​ಗಳನ್ನು ಪೂರೈಸಲು 14.4 ಓವರ್​ಗಳನ್ನು ತೆಗೆದುಕೊಂಡಿದೆ. ಈ ಮೂಲಕ ಹೆಚ್ಚುವರಿ 3 ಎಸೆತಗಳಿಂದ ಆರ್​ಸಿಬಿ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನು ಅಳಿಸಿ ಹಾಕುವ ಅವಕಾಶ ಕೈತಪ್ಪಿಸಿಕೊಂಡಿದೆ.

6 / 7
ಒಟ್ಟಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಸನ್​ರೈಸರ್ಸ್ ಹೈದರಾಬಾದ್​ ಈ ಬಾರಿಯ ಐಪಿಎಲ್​ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಈ ಸಂಚಲನ ಮುಂಬರುವ ಪಂದ್ಯಗಳಲ್ಲೂ ಮುಂದುವರೆಯಲಿದೆಯಾ ಕಾದು ನೋಡಬೇಕಿದೆ.

7 / 7
Follow us
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ