IPL 2024: ಪವರ್ ಹಿಟ್ಟರ್ಗಳ ಪಟ್ಟಿಗೆ ಜೇಕ್ ಫ್ರೇಸರ್ ಎಂಟ್ರಿ
TV9 Web | Updated By: ಝಾಹಿರ್ ಯೂಸುಫ್
Updated on:
Apr 28, 2024 | 10:28 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ ಮೊದಲ 6 ಓವರ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದು ಮೂವರು ಬ್ಯಾಟರ್ಗಳು ಮಾತ್ರ. ಈ ಮೂವರಲ್ಲಿ ಇಬ್ಬರು ಈ ಬಾರಿಯ ಐಪಿಎಲ್ ಮೂಲಕ ಈ ಸಾಧನೆ ಮಾಡಿದ್ದು ವಿಶೇಷ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಭಾರತೀಯ ದಾಂಡಿಗ ಸುರೇಶ್ ರೈನಾ ಎಂಬುದು ಮತ್ತೊಂದು ವಿಶೇಷ.
1 / 6
IPL 2024: ಟಿ20 ಕ್ರಿಕೆಟ್ನ ಪವರ್ಪ್ಲೇನಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ಗಳ ಪಟ್ಟಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ಆರಂಭಿಕ ಜೇಕ್ ಫ್ರೇಸರ್ ಮೆಕ್ಗುರ್ಕ್ (Jake Fraser-McGurk) ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಎಂಬುದು ವಿಶೇಷ.
2 / 6
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಜೇಕ್ ಫ್ರೇಸರ್ ಕೇವಲ 27 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ 11 ಫೋರ್ಗಳೊಂದಿಗೆ 84 ರನ್ ಬಾರಿಸಿ ಅಬ್ಬರಿಸಿದ್ದರು. ವಿಶೇಷ ಎಂದರೆ ಈ 84 ರನ್ಗಳಲ್ಲಿ 78 ರನ್ಗಳು ಮೊದಲ 6 ಓವರ್ಗಳಲ್ಲೇ ಕಲೆಹಾಕಿದ್ದರು.
3 / 6
ಇದರೊಂದಿಗೆ ಟಿ20 ಕ್ರಿಕೆಟ್ನ ಪವರ್ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಜೇಕ್ ಪ್ರೇಸಯ್ ಮೆಕ್ಗುರ್ಕ್ ಮೂರನೇ ಸ್ಥಾನಕ್ಕೇರಿದರು. ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿರುವ ಬ್ಯಾಟರ್ಗಳೆಂದರೆ...
4 / 6
ಟಿ20 ಕ್ರಿಕೆಟ್ ಇತಿಹಾಸದಲ್ಲಿ ಪವರ್ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. 2014 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್ಕೆ ಪರ ಅಬ್ಬರಿಸಿದ ರೈನಾ ಕೇವಲ 25 ಎಸೆತಗಳಲ್ಲಿ 87 ರನ್ ಬಾರಿಸಿದ್ದರು. ಇದು ಈಗಲೂ ದಾಖಲೆಯಾಗಿ ಉಳಿದಿದೆ.
5 / 6
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಟ್ರಾವಿಸ್ ಹೆಡ್. ಈ ಬಾರಿಯ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪವರ್ಪ್ಲೇ ಮುಕ್ತಾಯದ ವೇಳೆಗೆ ಟ್ರಾವಿಸ್ ಹೆಡ್ 26 ಎಸೆತಗಳಲ್ಲಿ 84 ರನ್ ಚಚ್ಚಿದ್ದರು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಮೊದಲ 6 ಓವರ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡರು.
6 / 6
ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲ 6 ಓವರ್ಗಳಲ್ಲಿ ಜೇಕ್ ಫ್ರೇಸರ್ ಮೆಕ್ಗುರ್ಕ್ 24 ಎಸೆತಗಳನ್ನು ಎದುರಿಸಿ 78 ರನ್ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಪವರ್ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.