IPL 2024: ಮೆಂಟರ್ ಗೌತಮ್ ಗಂಭೀರ್​ಗೆ ಹ್ಯಾಟ್ರಿಕ್ ಪ್ಲೇಆಫ್

IPL 2024: ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟ ಏಕೈಕ ನಾಯಕ ಗೌತಮ್ ಗಂಭೀರ್. 2012 ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ತಂಡ ಮೊದಲ ಬಾರಿಗೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿತು. ಇದಾದ ಬಳಿಕ 2014 ರಲ್ಲಿ ಮತ್ತೊಮ್ಮೆ ಗಂಭೀರ್ ಸಾರಥ್ಯದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಕೆಕೆಆರ್ ತಂಡ ಪ್ಲೇಆಫ್ ಹಂತಕ್ಕೇರಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 12, 2024 | 2:29 PM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಮೆಂಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸಿರುವ ಗೌತಮ್ ಗಂಭೀರ್ (Gautam Gambhir) ಮೂರನೇ ಬಾರಿಗೆ ಯಶಸ್ಸಿನ ತುದಿಗೆ ತಲುಪಿದ್ದಾರೆ. ಅದು ಕೂಡ ತಮ್ಮ ತಂಡವನ್ನು ಪ್ಲೇಆಫ್ ಹಂತಕ್ಕೇರಿಸುವ ಮೂಲಕ ಎಂಬುದು ವಿಶೇಷ.

1 / 5
ಅಂದರೆ ಐಪಿಎಲ್ 2022 ಮತ್ತು 2023 ರಲ್ಲಿ ಗೌತಮ್ ಗಂಭೀರ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಕಾಣಿಸಿಕೊಂಡಿದ್ದರು. ಯುವ ಆಟಗಾರರೊಂದಿಗೆ ತಮ್ಮ ಅನುಭವವನ್ನು ಧಾರೆಯೆರೆದಿದ್ದ ಗಂಭೀರ್ LSG ತಂಡ ಬ್ಯಾಕ್ ಟು ಬ್ಯಾಕ್ ಪ್ಲೇಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

2 / 5
ಇದೇ ಕಾರಣದಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಐಪಿಎಲ್​ಗೂ ಮುನ್ನ ತನ್ನ ಮಾಜಿ ನಾಯಕನನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಅದರಂತೆ ಈ ಬಾರಿ ಕೆಕೆಆರ್ ತಂಡದ ಮೆಂಟರ್ ಆಗಿ ಕಾಣಿಸಿಕೊಂಡ ಗಂಭೀರ್ ಅವರ ಕಾರ್ಯವೈಖರಿಯನ್ನು ಸುನಿಲ್ ನರೈನ್, ಆ್ಯಂಡ್ರೆ ರಸೆಲ್ ಸೇರಿದಂತೆ ಯುವ ಆಟಗಾರರು ಹಾಡಿ ಹೊಗಳುತ್ತಿದ್ದಾರೆ.

3 / 5
ಗಂಭೀರ್ ಅವರ ಈ ಅದ್ಭುತ ಮಾರ್ಗದರ್ಶನದಿಂದಾಗಿ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ನಿರೀಕ್ಷೆಗಿಂತ ಉತ್ತಮ ಪ್ರದರ್ಶನ ನೀಡಿದೆ. ಅಲ್ಲದೆ 12 ಪಂದ್ಯಗಳಲ್ಲಿ 9 ಜಯ ಸಾಧಿಸಿ ಈಗಾಗಲೇ ಪ್ಲೇಆಫ್ ಅರ್ಹತೆ ಗಿಟ್ಟಿಸಿಕೊಂಡಿದೆ. ಈ ಮೂಲಕ ಐಪಿಎಲ್​​ 2024 ರಲ್ಲಿ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿದೆ.

4 / 5
ಇದರ ಬೆನ್ನಲ್ಲೇ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರ ಕಾರ್ಯ ವೈಖರಿ ಬಗ್ಗೆ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಇತ್ತ ಗಂಭೀರ್ ಕೂಡ ಹ್ಯಾಟ್ರಿಕ್ ಫ್ಲೇಆಫ್​ನ ಖುಷಿಯಲ್ಲಿದ್ದಾರೆ. ಒಟ್ಟಿನಲ್ಲಿ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸಿರುವ ಗಂಭೀರ್ ಇದೀಗ ಕೋಚ್ ಚಂದ್ರಕಾಂತ್ ಪಂಡಿತ್ ಜೊತೆಗೂಡಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮೂರನೇ ಬಾರಿಗೆ ಚಾಂಪಿಯನ್​ ಪಟ್ಟ ತಂದು ಕೊಡಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ