AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Maxwell: ಮೊದಲ ಪಂದ್ಯದಲ್ಲೇ ಅನಗತ್ಯ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17ರ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸಿಎಸ್​ಕೆ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಸಿಎಸ್​ಕೆ ತಂಡ ಶುಭಾರಂಭ ಮಾಡಿದರೆ, ಆರ್​ಸಿಬಿ ಮತ್ತೊಮ್ಮೆ ಉದ್ಘಾಟನಾ ಪಂದ್ಯದಲ್ಲಿ ಮುಗ್ಗರಿಸಿದೆ. ಇನ್ನು ಈ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಐಪಿಎಲ್​ನಲ್ಲಿ ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ.

TV9 Web
| Edited By: |

Updated on: Mar 23, 2024 | 10:38 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಶುರುವಾಗಿದೆ. ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡಕ್ಕೆ ಸೋಲುಣಿಸಿ ಸಿಎಸ್​ಕೆ ತಂಡ ಶುಭಾರಂಭ ಮಾಡಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಅನಗತ್ಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 7
ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ (0) ದೀಪಕ್ ಚಹರ್ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಮ್ಯಾಕ್ಸ್​ವೆಲ್ ಮೂರನೇ ಸ್ಥಾನಕ್ಕೇರಿದ್ದಾರೆ.

2 / 7
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ದಿನೇಶ್ ಕಾರ್ತಿಕ್. 222 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಡಿಕೆ ಒಟ್ಟು 17 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 7
ಇನ್ನು ದ್ವಿತೀಯ ಸ್ಥಾನದಲ್ಲಿರುವುದ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ. 238 ಇನಿಂಗ್ಸ್​ಗಳಲ್ಲಿ ಹಿಟ್​ಮ್ಯಾನ್ ಒಟ್ಟು 16 ಬಾರಿ ಸೊನ್ನೆಗೆ ಔಟಾಗಿದ್ದಾರೆ.

4 / 7
ಇದೀಗ 121ನೇ ಇನಿಂಗ್ಸ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ 15ನೇ ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಐಪಿಎಲ್​ನ ಡಕ್​ ರಾಜರ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

5 / 7
ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ ಅಲ್ಲದೆ, ಮಂದೀಪ್ ಸಿಂಗ್ ಹಾಗೂ ಸುನಿಲ್ ನರೈನ್ ಕೂಡ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅಂದರೆ ಐಪಿಎಲ್ ಇತಿಹಾಸದಲ್ಲಿ 15 ಅಥವಾ ಅದಕ್ಕಿಂತ ಹೆಚ್ಚಿನ ಬಾರಿ ಶೂನ್ಯಕ್ಕೆ ಔಟಾಗಿರುವುದು ದಿನೇಶ್ ಕಾರ್ತಿಕ್, ರೋಹಿತ್ ಶರ್ಮಾ, ಗ್ಲೆನ್ ಮ್ಯಾಕ್ಸ್​ವೆಲ್, ಮಂದೀಪ್ ಸಿಂಗ್ ಹಾಗೂ ಸುನಿಲ್ ನರೈನ್ ಮಾತ್ರ.

6 / 7
ಒಟ್ಟಿನಲ್ಲಿ ಕಳೆದ ಸೀಸನ್​ನಲ್ಲಿ ಬಿಗ್ ಶೋ ತೋರಿಸಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿಯ ಐಪಿಎಲ್ ಅನ್ನು ಶೂನ್ಯದೊಂದಿಗೆ ಆರಂಭಿಸಿದ್ದಾರೆ. ಇದಾಗ್ಯೂ ಅವರು ಮುಂದಿನ ಪಂದ್ಯದಲ್ಲಿ ತಮ್ಮ ಆರ್ಭಟ ತೋರಿಸಲಿದ್ದಾರಾ ಕಾದು ನೋಡಬೇಕಿದೆ.

7 / 7
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?

ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್

ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು

ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು