AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರನಿಗೆ ಗಾಯ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಇದುವರೆಗೆ 6 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದಿದ್ದು ಬಿಟ್ಟರೆ, ಉಳಿದ 5 ಪಂದ್ಯಗಳಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಗ್ಗರಿಸಿದೆ. ಇನ್ನು ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಎಸ್​ಆರ್​​ಹೆಚ್ ವಿರುದ್ಧ ಕಣಕ್ಕಿಳಿಯಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 13, 2024 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಗಾಯಗೊಂಡಿದ್ದಾರೆ.

1 / 6
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಮ್ಯಾಕ್ಸ್​ವೆಲ್ ಅವರ ಹೆಬ್ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕ್ಯಾಮರೋನ್ ಗ್ರೀನ್ ಕಣಕ್ಕಿಳಿಯುವ ಸಾಧ್ಯತೆಯಿದೆ.

2 / 6
ಏಕೆಂದರೆ ಕಳೆದ ಪಂದ್ಯದಲ್ಲಿ ಕ್ಯಾಮರೋನ್ ಗ್ರೀನ್ ಬದಲಿಗೆ ವಿಲ್ ಜಾಕ್ಸ್ ಕಣಕ್ಕಿಳಿದಿದ್ದರು. ಇದೀಗ ಮ್ಯಾಕ್ಸ್​ವೆಲ್ ಹೊರಗುಳಿದರೆ ಅವರ ಸ್ಥಾನ ತುಂಬಬಲ್ಲ ಸಮರ್ಥ ಆಟಗಾರ ಆರ್​ಸಿಬಿ ತಂಡದಲ್ಲಿಲ್ಲ. ಹೀಗಾಗಿ ಔಟ್ ಆಫ್ ಫಾರ್ಮ್​ನಲ್ಲಿರುವ ಗ್ರೀನ್ ಅವರನ್ನೇ ಮತ್ತೆ ಕಣಕ್ಕಿಳಿಸಬೇಕಾದ ಅನಿವಾರ್ಯತೆ ಆರ್​ಸಿಬಿ ಮುಂದಿದೆ.

3 / 6
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಆಡಿರುವ 6 ಇನಿಂಗ್ಸ್​ಗಳಿಂದ ಮ್ಯಾಕ್ಸಿ ಕಲೆಹಾಕಿದ್ದು ಕೇವಲ 32 ರನ್​ಗಳು ಮಾತ್ರ. ಈ ಆರು ಇನಿಂಗ್ಸ್​ಗಳಲ್ಲಿ ಅವರು ಕಲೆಹಾಕಿದ ಗರಿಷ್ಠ ಸ್ಕೋರ್ 28 ರನ್​ಗಳು. ಇನ್ನುಳಿದ 5 ಇನಿಂಗ್ಸ್​ಗಳಲ್ಲಿ ಕ್ರಮವಾಗಿ 0,1,0,3,0 ಗೆ ವಿಕೆಟ್ ಒಪ್ಪಿಸಿದ್ದಾರೆ.

4 / 6
ಇದಾಗ್ಯೂ ನಿರ್ಣಾಯಕ ಪಂದ್ಯಗಳ ವೇಳೆ ಮ್ಯಾಕ್ಸ್​ವೆಲ್ ಫಾರ್ಮ್​ಗೆ ಮರಳುವ ನಿರೀಕ್ಷೆಯಿತ್ತು. ಆದರೀಗ ಸೋಲಿನ ಸಂಕೋಲೆಯಿಂದ ಪಾರಾಗುವ ಪ್ರಯತ್ನದಲ್ಲಿರುವ ಆರ್​ಸಿಬಿಗೆ ಮ್ಯಾಕ್ಸ್​ವೆಲ್ ಅವರ ಗಾಯವು ಹೊಸ ಚಿಂತೆಯನ್ನು ಉಂಟು ಮಾಡಿದೆ. ಒಟ್ಟಿನಲ್ಲಿ ಮೊದಲಾರ್ಧದ ಕೊನೆಯ ಪಂದ್ಯಗಳ ವೇಳೆ ಅನುಭವಿ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಗಾಯಗೊಂಡಿರುವುದು ಆರ್​ಸಿಬಿ ಪಾಲಿಗೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

5 / 6
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ಲಯಕ್ಕೆ ಮರಳಲಿದೆಯಾ ಕಾದು ನೋಡಬೇಕಿದೆ.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!