IPL 2024: RCB ಚಿಂತೆ ಹೆಚ್ಚಿಸಿದ ಗ್ಲೆನ್ ಮ್ಯಾಕ್ಸ್​ವೆಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 25ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪರ ಗ್ಲೆನ್ ಮ್ಯಾಕ್ಸ್​ವೆಲ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 08, 2024 | 12:52 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​-17 ರಲ್ಲಿ ಹೊಸ ಅಧ್ಯಾಯ ಬರೆಯಲು ಹೊರಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 4 ಪಂದ್ಯಗಳಲ್ಲೂ ಸೋಲನುಭವಿಸಿ ಇದೀಗ ಪಾಯಿಂಟ್ಸ್ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದೆ.

1 / 6
ಇತ್ತ ಆರ್​ಸಿಬಿ ತಂಡದ ಸೋಲಿಗೆ ಪ್ರಮುಖ ಕಾರಣ ಸ್ಟಾರ್ ಆಟಗಾರರ ಕಳಪೆ ಪ್ರದರ್ಶನ. ಅದರಲ್ಲೂ ಬಿಗ್ ಶೋ ಖ್ಯಾತಿಯ ಗ್ಲೆನ್ ಮ್ಯಾಕ್ಸ್​ವೆಲ್ ಫ್ಲಾಪ್ ಶೋ ತೋರಿಸುತ್ತಿರುವುದು ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

2 / 6
ಏಕೆಂದರೆ ಕಳೆದ ಐದು ಪಂದ್ಯಗಳಿಂದ ಗ್ಲೆನ್ ಮ್ಯಾಕ್ಸ್​ವೆಲ್ ಕಲೆಹಾಕಿರುವುದು ಕೇವಲ 32 ರನ್​ಗಳು ಎಂದರೆ ನಂಬಲೇಬೇಕು. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ಮ್ಯಾಕ್ಸಿ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 3 ರನ್​ಗಳು ಮಾತ್ರ.

3 / 6
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 28 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಮ್ಯಾಕ್ಸ್​ವೆಲ್ ಕಲೆಹಾಕಿದ್ದು ಕೇವಲ 1 ರನ್ ಮಾತ್ರ.

4 / 6
ಅಂದರೆ ಮೊದಲ ಐದು ಪಂದ್ಯಗಳಲ್ಲಿ ಮ್ಯಾಕ್ಸ್​ವೆಲ್ 2 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಮತ್ತೆರಡು ಬಾರಿ ಒಂದಂಕಿ ರನ್​ಗೆ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಇದುವರೆಗೆ ಕೇವಲ 6.40 ಸರಾಸರಿಯಲ್ಲಷ್ಟೇ ರನ್ ಕಲೆಹಾಕಿದ್ದಾರೆ. ಗ್ಲೆನ್ ಮ್ಯಾಕ್ಸ್​ವೆಲ್ ಅವರ ಈ ಫ್ಲಾಪ್ ಶೋ ಆರ್​ಸಿಬಿ ತಂಡದ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತಿದೆ.

5 / 6
ಏಕೆಂದರೆ ಇದೇ ಗ್ಲೆನ್ ಮ್ಯಾಕ್ಸ್​ವೆಲ್ ಕಳೆದ ಸೀಸನ್​ನಲ್ಲಿ, 14 ಪಂದ್ಯಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 400 ರನ್​ಗಳು. ಈ ವೇಳೆ 5 ಅರ್ಧಶತಕಗಳನ್ನೂ ಸಹ ಬಾರಿಸಿದ್ದರು. ಆದರೆ ಈ ಬಾರಿ ಮ್ಯಾಕ್ಸ್​ವೆಲ್​ಗೆ ಮೊದಲ ಐದು ಪಂದ್ಯಗಳಿಂದ 50 ರನ್​ ಕೂಡ ಕಲೆಹಾಕಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

6 / 6
Follow us
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ