IPL 2024: RCB ಚಿಂತೆ ಹೆಚ್ಚಿಸಿದ ಗ್ಲೆನ್ ಮ್ಯಾಕ್ಸ್ವೆಲ್
TV9 Web | Updated By: ಝಾಹಿರ್ ಯೂಸುಫ್
Updated on:
Apr 08, 2024 | 12:52 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 25ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಪರ ಗ್ಲೆನ್ ಮ್ಯಾಕ್ಸ್ವೆಲ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಲ್ಲಿ ಹೊಸ ಅಧ್ಯಾಯ ಬರೆಯಲು ಹೊರಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 5 ಪಂದ್ಯಗಳಲ್ಲಿ ಆರ್ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 4 ಪಂದ್ಯಗಳಲ್ಲೂ ಸೋಲನುಭವಿಸಿ ಇದೀಗ ಪಾಯಿಂಟ್ಸ್ ಟೇಬಲ್ನಲ್ಲಿ 9ನೇ ಸ್ಥಾನದಲ್ಲಿದೆ.
2 / 6
ಇತ್ತ ಆರ್ಸಿಬಿ ತಂಡದ ಸೋಲಿಗೆ ಪ್ರಮುಖ ಕಾರಣ ಸ್ಟಾರ್ ಆಟಗಾರರ ಕಳಪೆ ಪ್ರದರ್ಶನ. ಅದರಲ್ಲೂ ಬಿಗ್ ಶೋ ಖ್ಯಾತಿಯ ಗ್ಲೆನ್ ಮ್ಯಾಕ್ಸ್ವೆಲ್ ಫ್ಲಾಪ್ ಶೋ ತೋರಿಸುತ್ತಿರುವುದು ಆರ್ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.
3 / 6
ಏಕೆಂದರೆ ಕಳೆದ ಐದು ಪಂದ್ಯಗಳಿಂದ ಗ್ಲೆನ್ ಮ್ಯಾಕ್ಸ್ವೆಲ್ ಕಲೆಹಾಕಿರುವುದು ಕೇವಲ 32 ರನ್ಗಳು ಎಂದರೆ ನಂಬಲೇಬೇಕು. ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ಮ್ಯಾಕ್ಸಿ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 3 ರನ್ಗಳು ಮಾತ್ರ.
4 / 6
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 28 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಮ್ಯಾಕ್ಸ್ವೆಲ್ ಕಲೆಹಾಕಿದ್ದು ಕೇವಲ 1 ರನ್ ಮಾತ್ರ.
5 / 6
ಅಂದರೆ ಮೊದಲ ಐದು ಪಂದ್ಯಗಳಲ್ಲಿ ಮ್ಯಾಕ್ಸ್ವೆಲ್ 2 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಮತ್ತೆರಡು ಬಾರಿ ಒಂದಂಕಿ ರನ್ಗೆ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಇದುವರೆಗೆ ಕೇವಲ 6.40 ಸರಾಸರಿಯಲ್ಲಷ್ಟೇ ರನ್ ಕಲೆಹಾಕಿದ್ದಾರೆ. ಗ್ಲೆನ್ ಮ್ಯಾಕ್ಸ್ವೆಲ್ ಅವರ ಈ ಫ್ಲಾಪ್ ಶೋ ಆರ್ಸಿಬಿ ತಂಡದ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತಿದೆ.
6 / 6
ಏಕೆಂದರೆ ಇದೇ ಗ್ಲೆನ್ ಮ್ಯಾಕ್ಸ್ವೆಲ್ ಕಳೆದ ಸೀಸನ್ನಲ್ಲಿ, 14 ಪಂದ್ಯಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 400 ರನ್ಗಳು. ಈ ವೇಳೆ 5 ಅರ್ಧಶತಕಗಳನ್ನೂ ಸಹ ಬಾರಿಸಿದ್ದರು. ಆದರೆ ಈ ಬಾರಿ ಮ್ಯಾಕ್ಸ್ವೆಲ್ಗೆ ಮೊದಲ ಐದು ಪಂದ್ಯಗಳಿಂದ 50 ರನ್ ಕೂಡ ಕಲೆಹಾಕಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.