IPL 2024: ಐಪಿಎಲ್ಗೆ ಹಾರ್ದಿಕ್ ಪಾಂಡ್ಯ ಡೌಟ್..!
TV9 Web | Updated By: ಝಾಹಿರ್ ಯೂಸುಫ್
Updated on:
Dec 23, 2023 | 3:04 PM
IPL 2024 Hardik Pandya: ಹಾರ್ದಿಕ್ ಪಾಂಡ್ಯ ಐಪಿಎಲ್ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.
1 / 8
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ಸೀಸನ್-17 ರಲ್ಲಿ ಕಣಕ್ಕಿಳಿಯುವುದು ಅನುಮಾನ. ಪಾದದ ಗಾಯದಿಂದ ಬಳಲುತ್ತಿರುವ ಅವರು ಐಪಿಎಲ್ ಆರಂಭದ ವೇಳೆಗೆ ಫಿಟ್ ಸಾಧಿಸುವುದು ಕಷ್ಟಕರ. ಹೀಗಾಗಿ ಐಪಿಎಲ್ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
2 / 8
ಏಕದಿನ ವಿಶ್ವಕಪ್ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿದ್ದ ಕಾರಣ ಅವರು ವಿಶ್ವಕಪ್ನಿಂದ ಹೊರಗುಳಿದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲೂ ಅವರ ಕಾಣಿಸಿಕೊಂಡಿರಲಿಲ್ಲ.
3 / 8
ಇದೀಗ ಅಫ್ಘಾನಿಸ್ತಾನ್ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದಲೂ ಹಾರ್ದಿಕ್ ಪಾಂಡ್ಯ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೆ ಅವರು ಸಂಪೂರ್ಣ ಫಿಟ್ನೆಸ್ ಸಾಧಿಸಲು 2 ರಿಂದ 3 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
4 / 8
ಹಾರ್ದಿಕ್ ಪಾಂಡ್ಯ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡರಿಂದ ಮೂರು ತಿಂಗಳು ತೆಗೆದುಕೊಂಡರೆ, ಐಪಿಎಲ್ನಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು. ಏಕೆಂದರೆ ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಐಪಿಎಲ್ಗೆ ಮರಳಬೇಕಿದ್ದರೆ ಪಾಂಡ್ಯ ಫಿಟ್ನೆಸ್ ಟೆಸ್ಟ್ ಪಾಸಾಗಲೇಬೇಕು. ಹಾಗಾಗಿ ಹಾರ್ದಿಕ್ ಪಾಂಡ್ಯ ಹೆಚ್ಚಿನ ರಿಸ್ಕ್ ತೆಗೆದುಕೊಳ್ಳುವ ಸಾಧ್ಯತೆಯಿಲ್ಲ.
5 / 8
ಇನ್ನು ಹಾರ್ದಿಕ್ ಮರಳುವ ಕುರಿತು ಯಾವುದೇ ಮಾಹಿತಿ ಇಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಮೊದಲು ಅವರ ಲಭ್ಯತೆಯ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದೆ. ಹೀಗಾಗಿ ಐಪಿಎಲ್ನಿಂದ ಪಾಂಡ್ಯ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.
6 / 8
ಇತ್ತ ಹಾರ್ದಿಕ್ ಪಾಂಡ್ಯ ಐಪಿಎಲ್ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.
7 / 8
ಇದೀಗ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಮತ್ತೆ ರೋಹಿತ್ ಶರ್ಮಾಗೆ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಿದೆ. ಆದರೆ ಒಂದು ಬಾರಿ ಕಪ್ತಾನನ ಸ್ಥಾನದಿಂದ ಕೆಳಗಿಳಿದಿರುವ ರೋಹಿತ್ ಶರ್ಮಾ ಮತ್ತೆ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರಾ ಎಂಬುದೇ ದೊಡ್ಡ ಪ್ರಶ್ನೆ.
8 / 8
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.