ಕೊನೆಯ ಓವರ್ನಲ್ಲಿ ಎಸ್ಆರ್ಹೆಚ್ ತಂಡಕ್ಕೆ 13 ರನ್ಗಳ ಅವಶ್ಯಕತೆಯಿತ್ತು. ಈ ವೇಳೆ ದಾಳಿಗಿಳಿದ ಹರ್ಷಿತ್ ರಾಣಾ ಅವರ ಮೊದಲ ಎಸೆತಕ್ಕೆ ಹೆನ್ರಿಕ್ ಕ್ಲಾಸೆನ್ ಸಿಕ್ಸ್ ಸಿಡಿಸಿದರು. ಇದಾದ ಬಳಿಕ 5 ಎಸೆತಗಳಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಕೇವಲ 2 ರನ್ ಮಾತ್ರ ಬಿಟ್ಟುಕೊಟ್ಟಿದ್ದರು. ಈ ಮೂಲಕ ಕೆಕೆಆರ್ ತಂಡಕ್ಕೆ 4 ರನ್ಗಳ ರೋಚಕ ಜಯ ತಂದುಕೊಡುವಲ್ಲಿ ಹರ್ಷಿತ್ ರಾಣಾ ಯಶಸ್ವಿಯಾಗಿದ್ದರು. ಇದೀಗ ಈ ಯಶಸ್ಸಿನ ಬೆನ್ನಲ್ಲೇ ಯುವ ವೇಗಿ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ.