IPL 2024: ಹರ್ಷಿತ್ ರಾಣಾಗೆ ಒಂದು ಪಂದ್ಯ ನಿಷೇಧ..!
TV9 Web | Updated By: ಝಾಹಿರ್ ಯೂಸುಫ್
Updated on:
May 01, 2024 | 7:23 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಭರ್ಜರಿ ಪ್ರದರ್ಶನ ನೀಡುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. 9 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಕೆಕೆಆರ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೆ ಹರ್ಷಿತ್ ರಾಣಾ ಲಭ್ಯರಿರುವುದಿಲ್ಲ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2024) ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಯುವ ವೇಗಿ ಹರ್ಷಿತ್ ರಾಣಾ (Harshit Rana) ಅವರನ್ನು ಒಂದು ಪಂದ್ಯದಿಂದ ಅಮಾನತು ಮಾಡಲಾಗಿದೆ. ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾಣಾ ಅವರನ್ನು ಒಂದು ಪಂದ್ಯಕ್ಕೆ ನಿಷೇಧಿಸಲಾಗಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಕೆಕೆಆರ್ ಪರ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ.
2 / 5
ಸೋಮವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಅಭಿಷೇಕ್ ಪೊರೆಲ್ ವಿಕೆಟ್ ಕಬಳಿಸಿದ ಹರ್ಷಿತ್ ರಾಣಾ ಮೈದಾನದಿಂದ ಹೊರ ನಡೆಯುವಂತೆ ಕೈ ಸನ್ನೆ ಮಾಡಿ ಸಂಭ್ರಮಿಸಿದ್ದರು. ಇದು ಐಪಿಎಲ್ ನೀತಿ ಸಂಹಿತೆಯ ಸೆಕ್ಷನ್ 2.5 ರ ಅಡಿಯಲ್ಲಿ ಅಪರಾಧವಾಗಿದ್ದು, ಹೀಗಾಗಿ ರಾಣಾಗೆ ಒಂದು ಪಂದ್ಯದ ನಿಷೇಧದ ಜೊತೆಗೆ ಪಂದ್ಯದ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿದೆ.
3 / 5
ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಹರ್ಷಿತ್ ರಾಣಾ ಅನುಚಿತವಾಗಿ ವರ್ತಿಸಿದ್ದರು. ಮಯಾಂಕ್ ಅರ್ಗರ್ವಾಲ್ ವಿಕೆಟ್ ಪಡೆದಿದ್ದ ರಾಣಾ ಫ್ಲೈಯಿಂಗ್ ಕಿಸ್ ನೀಡಿ ಬೀಳ್ಕೊಟ್ಟಿದ್ದರು. ಹಾಗೆಯೇ ಕೊನೆಯ ಓವರ್ನಲ್ಲಿ ಹೆನ್ರಿಕ್ ಕ್ಲಾಸೆನ್ ವಿಕೆಟ್ ಕಬಳಿಸಿದ ಬಳಿಕ ಪೆವಿಲಿಯನ್ಗೆ ದಾಟುವಂತೆ ಕೈ ಸನ್ನೆ ಮಾಡಿದ್ದರು.
4 / 5
ಹೀಗೆ ಎರಡು ಬಾರಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಹರ್ಷಿತ್ ರಾಣಾ ಅವರ ಒಟ್ಟು ಪಂದ್ಯ ಶುಲ್ಕದ ಮೇಲೆ ಶೇಕಡಾ 60 ರಷ್ಟು ದಂಡ ವಿಧಿಸಲಾಗಿತ್ತು. ಇದೀಗ ಮತ್ತೊಮ್ಮೆ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಹರ್ಷಿತ್ಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಒಂದು ಪಂದ್ಯದಿಂದ ಅಮಾನತು ಮಾಡಲಾಗಿದೆ.
5 / 5
ಹೀಗಾಗಿ ಶುಕ್ರವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಹರ್ಷಿತ್ ರಾಣಾ ಕಣಕ್ಕಿಳಿಯುವಂತಿಲ್ಲ. ಒಟ್ಟಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿರುವ 22 ವರ್ಷದ ಯುವ ವೇಗಿ ಇದೀಗ ಅನುಚಿತ ವರ್ತನೆಯಿಂದಲೇ ಸುದ್ದಿಯಾಗುತ್ತಿರುವುದು ಮಾತ್ರ ವಿಪರ್ಯಾಸ ಎಂದೇ ಹೇಳಬಹುದು.